ಅಕ್ರಮ ಮದ್ಯ ಮಾರಾಟ, ಮಟ್ಕಾ, ಮರಳು ದಂದೆಯ ಮೇಲೆ ದಾಳಿ

Koppal News

ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತೂರ ಗ್ರಾಮದಲ್ಲಿ ಆರೋಪಿತನಾದ ಕೊಟ್ರಪ್ಪ ತಂದೆ ಬಸಪ್ಪ ಹಳ್ಳಿಕೇರಿ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ತನ್ನ ಚಹಾದ ಅಂಗಡಿಯಲ್ಲಿ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾಗ ಶಿವರಾಜ ಇಂಗಳೆ ಪಿ.ಎಸ್.ಐ. ಅಳವಂಡಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುನಕುಂಟಿ ಗ್ರಾಮದಲ್ಲಿ ಆರೋಪಿತನಾದ ಹನುಂತಪ್ಪ ತಂದೆ ಕೆಂಚಪ್ಪ ಬೆಟಗೇರಿ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ತನ್ನ ಚಿಕನ ಅಂಗಡಿಯ ಮುಂದೆ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾಗ ಶಿವರಾಜ ಇಂಗಳೆ ಪಿ.ಎಸ್.ಐ. ಅಳವಂಡಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ

ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಯಾಪಲದಿನ್ನಿ ಗ್ರಾಮದಲ್ಲಿ ಆರೋಪಿತನಾದ ಭಿಮಪ್ಪ ತಂದೆ ಬಸಪ್ಪ ಮಾಟರಂಗಿ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ತನ್ನ ಪಾನ ಅಂಗಡಿಯ ಮುಂದೆ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾಗ ಡಿ.ಎಸ್. ಆಂಜನೇಯ ಪಿ.ಎಸ್.ಐ. ಬೇವೂರ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬಳೋಟಗಿ ಗ್ರಾಮದಲ್ಲಿ ಆರೋಪಿತನಾದ ರಾಮಣ್ಣ ತಂದೆ ಮುಕಪ್ಪ ಮೇಟಿ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ತನ್ನ ಕಿರಾಣಿ ಅಂಗಡಿಯ ಮುಂದೆ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾಗ ವಿರುಪಯ್ಯ ಎ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಇಸ್ಪೇಟ ಜೂಜಾಟ ದಾಳಿ
ದಿನಾಂಕ 15-10-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಬಗನಾಳ ಗ್ರಾಮದ ಮಸೀದಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ಇಸ್ಪೇಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಕೆ. ಜಯಪ್ರಕಾಶ ಪಿ.ಎಸ್.ಐ ಮುನಿರಾಬಾದ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 08 ಜನ ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರಿಂದ ರೂ 4,300/- ಗಳನ್ನು ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.
ಮಟಕಾ ದಾಳಿ
ದಿನಾಂಕ 15-10-2018 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜುಲೈ ನಗರದಲ್ಲಿ ಸೋಮಪ್ಪ ಹೊಟೇಲ್ ಮುಂದೆ ಸಾರ್ವಜನಿಕ ಸ್ಥಳದಲ್ಲಿ, ಆರೋಪಿತನಾದ ಶಕ್ಷಾವಲಿ ತಂದೆ ಅಜೀಮಸಾಬ ಸಾ: ಗಂಗಾವತಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 930=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ
ದಿನಾಂಕ 15-10-2018 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲಿ ಗ್ರಾಮದ ಹುಚ್ಚಮ್ಮ ದೇವಸ್ಥಾನದ ಹತ್ತಿರ ಇರುವ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತರು ತುಂಬುವಾಗ ಶ್ರೀ. ವೀರಾರೆಡ್ಡಿ ಪಿ.ಎಸ್.ಐ ಕನಕಗಿರಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತರು ಟ್ರ್ಯಾಕ್ಟರ ಬಿಟ್ಟು ಓಡಿಹೋಗಿದ್ದು, ಚಾಲಕ ಮತ್ತು ಮಾಲೀಕನ ವಿರುದ್ದ ಪ್ರಕರಣಗ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

Please follow and like us:
error