You are here
Home > Election_2018 > ಅನ್ಸಾರಿ ಭರ್ಜರಿ ಪ್ರಚಾರ

ಅನ್ಸಾರಿ ಭರ್ಜರಿ ಪ್ರಚಾರ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ, ವಿವಿಧ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಮಾಡುವ ಮೂಲಕ ಜನರನ್ನು ತಮ್ಮತ್ತ ಸೇಳೆಯುತ್ತಿದ್ದಾರೆ. ಇನ್ನು ರಾಜ್ಯದ ಗಮನ ಸೇಳೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇಷ್ಟು ದಿನ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ್ದ ಇಕ್ಬಾಲ್ ಅನ್ಸಾರಿ ಇಂದಿನಿಂದ

ಗಂಗಾವತಿಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ನಗರದ ವಿವಿಧ ವಾರ್ಡ್ ಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇವರಿಗೆ ವಾರ್ಡ್ ನ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಸಾಥ್ ನೀಡಿದ್ರು. ಕಾರ್ಯಕರ್ತರು ಭರ್ಜರಿ ಮೆರವಣಿಗೆಯ ಮೂಲಕ ಸ್ವಾಗತ ಕೋರಿದರಲ್ಲದೇ ಕುಣಿದು ಕುಪ್ಪಳಿಸಿದರು. ಪ್ರಚಾರ ಕಾರ್ಯಕ್ರಮದಲ್ಲಿ ಮಾಜಿ ಸಂಸದ‌ ಶಿವರಾಮಗೌಡ, ಮಾಜಿ ಸಚಿವ ನಾಗಪ್ಪ ಸಾಲೋಣಿ ಉಪಸ್ಥಿತರಿದ್ದರು.

Top