ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಕೊಪ್ಪಳ ಡಿ.೧೪ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪತ್ರಿಕೋದ್ಯಮ ಪದವೀಧರರಿಗೆ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ/ ಎಲೆಕ್ಟಾನಿಕ ಮಾಧ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಒಂದು ವೇಳೆ ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ ಪದವೀಧರ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ರೂ. ೧೫ ಸಾವಿರ ರೂಪಾಯಿ ಸ್ಪೈಫಂಡ್ ಅನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮೂಲಕ ನೀಡಲಾಗುವುದು. ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಲಭ್ಯವಿಲ್ಲದಿದ್ದರೆ ಅಕ್ಕಪಕ್ಕದ ಜಿಲ್ಲೆಗಳ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಕಳೆದ ಬಾರಿ ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗೆ ಪರಿಗಣಿಸುವುದಿಲ್ಲ. ಪರಿಶಿಷ್ಟ ಜಾತಿ ಹಾಗೂ ಪಂಗಡದ ತಲಾ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಡಿ. ೨೧ ಕೊನೆಯ ದಿನವಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ವಾರ್ತಾ ಇಲಾಖೆಯ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ, ಶೈಕ್ಷಣಿಕ ದಾಖಲಾತಿ ಮತ್ತು ಜಾತಿ ಪ್ರಮಾಣಪತ್ರಗಳೊಂದಿಗೆ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೫೩೯-೨೨೦೬೦೭ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಧನಂಜಯಪ್ಪ ತಿಳಿಸಿದ್ದಾರೆ.

Please follow and like us:
error