ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ದಿನ ಆಚರಣೆ : ಪಿ. ಸುನೀಲ್ ಕುಮಾರ್

ಕೊಪ್ಪಳ ಜ. ತೆ): ಇದೇ ಜ. 26 ರಂದು ಕೊಪ್ಪಳ ಜಿಲ್ಲೆಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು. ಗಣರಾಜ್ಯೋತ್ಸವ ಆಚರಣೆ ಕುರಿತು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ. 26 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಉತ್ತಮ ಸಾದನೆ ಮಾಡಿದ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಗಣ್ಯರಿಗೆ ಸನ್ಮಾನಿಸಲಾಗುವುದು. ಅಂದು ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲು ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲಾ ಕ್ರೀಡಾಂಗಣ ರಸ್ತೆ ಮೂಲಕವೇ ಹೊರಡುವ ಇತರೆ ಬಸ್‍ಗಳಲ್ಲಿ ಸಹ ಮಕ್ಕಳನ್ನು ಕ್ರೀಡಾಂಗಣದ ವರೆಗೆ ಕರೆದುಕೊಂಡು ಹೋಗುವಂತೆ ಸಂಸ್ಥೆಯು ಬಸ್ ಚಾಲಕರಿಗೆ ನಿರ್ದೆಶನವನ್ನು ನೀಡಬೇಕು. ಸ್ಕೌಟ್ಸ್ & ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳು, ಗೃಹ ರಕ್ಷಕ ದಳದವರಿಂದ ಪರೇಡ್ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವ ಸಿದ್ಧತೆಗಾಗಿ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಕುಡಿಯುವ ನೀರು ಮತ್ತು ಹಾಲು ವಿತರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಎಲ್ಲಾ ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ನೆರಳು ಬರುವಂತೆ ಇನ್ನೂ ಹೆಚ್ಚು ಪೆಂಡಲ್‍ಗಳನ್ನು ಹಾಕಬೇಕು. ಅಲ್ಲದೇ ಆಯ್ದ 04 ಶಾಲಾ ತಂಡಗಳಿಂದ ನೃತ್ಯ ಕಾರ್ಯಕ್ರಮ ಕೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮತ್ತು ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಗುವುದು. ಅಂದು ಸಂಜೆ ಸಾಹಿತ್ಯ ಭವನದಲ್ಲಿ ಸಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಗಣರಾಜ್ಯೋತ್ಸವ ದಿನಾಚರಣೆ ಹಿಂದಿನ ದಿನ ನಗರದ ಪ್ರಮುಖ ರಸ್ತೆ ಮತ್ತು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಹಿತ್ಯ ಭವನವನ್ನು ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಡಿ. ಪಿ. ಸುನೀಲ್ ಕುಮಾರ್ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಆರೋಗ್ಯ ಇಲಾಖೆ ಶಿವಾನಂದ ಪೂಜಾರ, ಅರಣ್ಯ ಇಲಾಖೆಯ ರಾಜುನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಿರಿಯ ಸಾಹಿತಿ ಹೆಚ್.ಎಸ್. ಪಾಟೀಲ್, ಅಲ್ಲಮಪ್ರಭು ಬೆಟದೂರ, ಮಹೇಶಬಾಬು ಸುರ್ವೆ, ಡಾ. ಜ್ಞಾನಸುಂದರ, ಮಂಜುನಾಥ ಗೊಂಡಬಾಳ ಸೇರಿದಂತೆ ಉಪಸ್ಥಿತರಿದ್ದರು
=======

Please follow and like us:
error