ಅರ್ಥಪೂರ್ಣವಾಗಿ ಭಕ್ತ ಕನಕದಾಸರ ಜಯಂತಿ ಆಚರಣೆ : ಸಿ.ಡಿ. ಗೀತಾ

ಕೊಪ್ಪಳ ನ. : ಇದೇ ನ. 26 ರಂದು ಸಂತ ಶ್ರೇಷ್ಠ ಭಕ್ತ ಕನಕದಾಸ ಅವರ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಹೇಳಿದರು.
ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾದ ಪೂರ್ವಬಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆಯನ್ನು ನ. 26 ರಂದು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಆಯೋಜಿಸಲಾಗುವುದು. ಅಂದು ಬೆಳಿಗ್ಗೆ 9 ಗಂಟೆಗೆ ಸಂತ ಶ್ರೇಷ್ಠ ಭಕ್ತ ಕನಕದಾಸರ ಭಾವಚಿತ್ರದೊಂದಿಗೆ ಮೇರವಣಿಗೆಯು ಸಿರಸಪ್ಪಯ್ಯನಮಠದಿಂದ ಪ್ರಾರಂಭಗೊಂಡು ಸಾಹಿತ್ಯ ಭವನದವರೆಗೆ ಸಾಗಿಬರಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಸಮಾರಂಭದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದ್ದು, ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆಯು ಗುರುತಿಸಿ ಅವರಿಗೆ ಪ್ರಶಸ್ತಿ ಪತ್ರವನ್ನು ಪ್ರದಾನ ವ್ಯವಸ್ಥೆ ಮಾಡಬೇಕು. ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಕೈಗೊಳ್ಳಬೇಕು. ಮೇರವಣಿಗೆಯು ಸಾಗಿಬರುವ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹನಿಯರ ಕುರಿತು ಎಲ್ಲಾ ಸಾರ್ವಜನಿಕರಿಗೆ ತಿಳಿಸಲು ಸರ್ಕಾರದ ವತಿಯಿಂದ ಜಯಂತಿ ಆಚರಣೆ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿರುತ್ತದೆ. ನಿಗದಿತ ಸಮಯದಲ್ಲಿಯೇ ಮೇರವಣಿಗೆಯನ್ನು ಪೂರ್ಣಗೊಳಿಸಿ, ಸಮಾರಂಭದಲ್ಲಿ ಭಾಗವಹಿಸಿ. ಎಲ್ಲರೂ ಉಪನ್ಯಾಸ ಕಾರ್ಯಕ್ರಮಕ್ಕೆ ಒತ್ತು ನೀಡಿ. ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆಯ ಮೆರವಣಿಗೆ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ, ತಹಶೀಲ್ದಾರ ಜೆ.ಬಿ ಮಜ್ಗಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಮಾಜದ ಮುಖಂಡರುಗಳಾದ ಸಾಹಿತಿ ಹೆಚ್.ಎಸ್. ಪಾಟೀಲ್, ಅಲ್ಲಮಪ್ರಭು ಬೆಟ್ಟದೂರ, ಗುಡದಪ್ಪ ಹಲಗೇರಿ ಮತ್ತಿತರರು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು

Please follow and like us:
error