ಅರ್ಥಪೂರ್ಣವಾಗಿ ಸರ್ವಜ್ಞ ಜಯಂತಿ ಆಚರಣೆ : ಡಾ. ರುದ್ರೇಶ ಘಾಳಿ

ಇದೇ ಫೆ. ೨೦ ರಂದು ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು. 
ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಫೆ. ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ವೇದಿಕೆ ಸಮಾರಂಭ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಡಾ. ಮಲ್ಲಿಕಾರ್ಜುನ ಕುಂಬಾರ ಅವರು ಸರ್ವಜ್ಞರ ಕುರಿತು ವಿಶೇಷ ಉಪನ್ಯಾಸ ನೀಡುವರು. ವೇದಿಕೆ ಸಮಾರಂಭದ ನಂತರ ಸಾಹಿತ್ಯ ಭವನದಿಂದ ಕವಿ ಸರ್ವಜ್ಞರ ಭಾವಚಿತ್ರದೊಂದಿಗೆ ಮೆರವಣಿಗೆಯು ಪ್ರಾರಂಭವಾಗಲಿದೆ. ಮೆರವಣಿಗೆಯು ಅಶೋಕವೃತ್ತ, ಜವಾಹರ ರಸ್ತೆ, ಆಜಾದ್ ಸರ್ಕಲ್, ಮೂಲಕ ಪ್ಯಾಟಿ ಈಶ್ವರ ದೇವಸ್ಥಾನದವರೆಗೆ ಸಾಗಿ ಬರಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ವಿವಿಧ ಸಮಾಜ ಬಾಂಧವರು, ಸಾರ್ವಜನಿಕರು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾದಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಯು. ನಾಗರಾಜ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗಣ್ಯರು ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Please follow and like us:
error