ಆಕ್ಸಿಜನ್ ಬಸ್ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿಡಿಸಿಎಂ ಲಕ್ಷ್ಮಣ ಸವದಿ


ಕೊಪ್ಪಳ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಕ್ಸಿಜನ್ ಬಸ್ಸನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಇಂದು (ಮೇ 24) ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಬೆಂಗಳೂರು ಮಾದರಿಯಲ್ಲಿ ಐಸಿಯು ಬಸ್ಸುಗಳನ್ನು ತಯಾರಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ತಾಲ್ಲೂಕಿಗೆ ಒಂದರAತೆ ಶಾಸಕರ ನಿಧಿಯನ್ನು ಬಳಕೆ ಮಾಡಿಕೊಂಡು ಆಕ್ಸಿಜನ್‌ಯುಕ್ತ ಬಸ್ಸನ್ನು ಸೇವೆಗೆ ಒದಗಿಸಿ ಎಂದು ಕೆ.ಎಸ್.ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ರವರಿಗೆ ಸೂಚನೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, 9 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಓಡಿದ ಬಸ್‌ಗಳನ್ನು ಗುಜರಿಗೆ ಹಾಕಬೇಕು. ಆದರೆ ಅಂತಹ ಗುಜರಿಗೆ ಹಾಕುವ ಬಸ್ಸುಗಳನ್ನು ಆಧುನೀಕರಿಸಿ, ಆಕ್ಸಿಜನ್‌ಯುಕ್ತ ಬಸ್‌ಗಳನ್ನಾಗಿ ಪರಿವರ್ತಿಸಿದ್ದೇವೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾದ ಸಂದರ್ಭದಲ್ಲಿ ಈ ಆಕ್ಸಿಜನ್‌ಯುಕ್ತ ಬಸ್‌ಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ರೋಗಿಗಳಿಗೆ ಅನುಕೂಲ ಆಗುತ್ತದೆ. ಇದನ್ನು ಸಾರ್ವಜನಿಕರು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು. ರಾಜ್ಯದಲ್ಲಿ 100 ಆಮ್ಲಜನಕಯುಕ್ತ ಬಸ್‌ಗಳನ್ನು ತಯಾರಿಸಲು ಯೋಚಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ಹಾಗೂ ದೊಡ್ಡ ದೊಡ್ಡ ತಾಲ್ಲೂಕುಗಳಿಗೂ ಆಮ್ಲಜನಕಯುಕ್ತ ಬಸ್ ಒದಗಿಸಲಾಗುತ್ತದೆ. ಈ ಆಮ್ಲಜನಕ ಯುಕ್ತ ಬಸ್ 5 ಆಕ್ಸಿಜನ್ ಬೆಡ್ ಹಾಗೂ 1 ವೆಂಟಿಲೇಟರ್ ಬೆಡ್ ಹೊಂದಿದೆ. ಫ್ಯಾನ್ ಕೂಡಾ ಅಳವಡಿಸಲಾಗಿದೆ. ಇದರಲ್ಲಿ ಒಬ್ಬ ವೈದ್ಯರು, ನರ್ಸ್, ಸಿಬ್ಬಂದಿ ಇರುತ್ತಾರೆ. ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಸಾರಿಗೆ ಇಲಾಖೆ ಅಡಿ ಬರುವ ಎಲ್ಲ ನಿಗಮಗಳ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದೊಂದು ಉತ್ತಮ ಯೋಜನೆಯಾಗಿದ್ದು, ಬೇರೆ ಬೇರೆ ರಾಜ್ಯದವರು ಇದರ ಮಾಹಿತಿ ಪಡೆದು, ತಮ್ಮ ರಾಜ್ಯದಲ್ಲೂ ಇಂತಹ ಆಮ್ಲಜನಕಯುಕ್ತ ಬಸ್‌ಗಳನ್ನು ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಬ್ಲಾಕ್ ಫಂಗಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಕುರಿತು ಸರ್ಕಾರ ಗಮನ ಹರಿಸುತ್ತಿದೆ. ಬ್ಲಾಕ್ ಫಂಗಸ್‌ಗೆ 45 ಚುಚ್ಚುಮದ್ದುಗಳ ಅವಶ್ಯಕತೆ ಇದ್ದು, ಚುಚ್ಚುಮದ್ದಿನ ಕೊರತೆ ಉಂಟಾಗುತ್ತಿದೆ. ಈ ರೋಗ ಕಾಣಿಸಿಕೊಂಡ ರೋಗಿಯು 45 ದಿನ ಚಿಕಿತ್ಸೆ ಪಡೆಯಬೇಕಾಗುತ್ತದೆ. ಈ ರೋಗಕ್ಕೆ ಬಹಳಷ್ಟು ಹಣ ಖರ್ಚಾಗುತ್ತದೆ. ಹಾಗಾಗಿ ಬಡವರಿಗೆ ಚಿಕಿತ್ಸೆ ಪಡೆಯಲು ಕಷ್ಟವಾಗುವುದರಿಂದ ಈ ರೋಗಕ್ಕೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ಕೊಡಬೇಕು ಎನ್ನುವ ಆಲೋಚನೆ ಇದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಕೆ.ಎಸ್.ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error