ಆರೋಗ್ಯ ಇಲಾಖೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಸಮಾಪನೆ : ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ಡಿ. 22 (): ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದ ವತಿಯಿಂದ ಜಿಲ್ಲೆಯ ಕುಕನೂರಿನ ಆರೋಗ್ಯ ಇಲಾಖೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘವನ್ನು ಸಮಾಪನೆ ಗೊಳಿಸಬೇಕಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಆರೋಗ್ಯ ಇಲಾಖೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಕುಕನೂರು ತಾ: ಯಲಬುರ್ಗಾ ಜಿ: ಕೊಪ್ಪಳ, ಸಂಘವು ತಾಲೂಕು ಮಟ್ಟಕ್ಕಿಂತ ಕಡಿಮೆ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು, ಸಂಘವು 2011-12 ರಿಂದ ಇಲ್ಲಿಯವರೆಗೂ ಕಾರ್ಯ ಚಟುವಟಿಕೆಯನ್ನು ನಿರ್ವಹಿಸದೇ ಸ್ಥಗಿತಗೊಂಡಿರುತ್ತದೆ. ಆದ್ದರಿಂದ ಈ ಸಹಕಾರ ಸಂಘವನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 72 ರಡಿಯಲ್ಲಿ ಸಮಾಪನೆಗೊಳಿಸಲು ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ, ಒಂದು ವಾರದೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿ, ಕೊಪ್ಪಳ ದೂ.ಸಂ. 08539-221109, ಇವರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಕಾಲಾವಧಿಯಲ್ಲಿ ಯಾವೂದೇ ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಈ ಸಂಘವನ್ನು ಕಾನೂನು ರೀತ್ಯಾ ಸಮಾಪನೆಗೊಳಿಸಲಾಗುವುದು ಎಂದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======

Please follow and like us:
error