ಆ. ೧೯ ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ

ಆ. ೧೯ ರಂದು ನಡೆಯಬೇಕಿದ್ದ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ನೇಮಕಾತಿ, ಬೆಂಗಳೂರು ಇವರ ಸಂದೇಶದನ್ವಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ)-೨೧೧೩ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಆ. ೧೯ ರಂದು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಕಾರಣದಿಂದಾಗಿ ಪ್ರವಾಹವು ಅಧಿಕವಾಗಿರುವ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಡಚಣೆ ಉಂಟಾಗಿರುವುದರಿಂದ, ಆ. ೧೯ ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಮುಂದಿನ ಲಿಖಿತ ಪರೀಕ್ಷೆ ಜರುಗುವ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.