ಇಂದು 14 ಜನರಲ್ಲಿ ಕೋವಿಡ್-19 ಸೋಂಕು : ಟ್ರಾವೆಲ್ ಹಿಸ್ಟರಿ ಇಲ್ಲಿದೆ ನೋಡಿ

ಕೊಪ್ಪಳ  : ಜಿಲ್ಲೆಯಲ್ಲಿ ಇಂದು #8ವರ್ಷದ ಬಾಲಕಿ ಸೇರಿದಂತೆ #14ಜನರಲ್ಲಿ ಕೋವಿಡ್-19 ಸೋಂಕು #ದೃಢಪಟ್ಟಿದೆ ಎಂದು #ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ #ತಿಳಿಸಿದ್ದಾರೆ.

ಕುಷ್ಟಗಿ ತಾಲ್ಲೂಕಿನ ತಾವರಗೇರಾದಲ್ಲಿ 23 ವರ್ಷದ ಮಹಿಳೆ ಮತ್ತು 24 ವರ್ಷದ ಇಬ್ಬರು ಹಾಗೂ 34 ವರ್ಷ ಮತ್ತು 30 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಅವರೆಲ್ಲರೂ ಆರೋಗ್ಯ ಸಿಬ್ಬಂದಿಯಾಗಿದ್ದಾರೆ. ತಾಲ್ಲೂಕಿನ ದೊಣ್ಣೆಗುಡ್ಡದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಅವರು ಬೆಂಗಳೂರಿನ ಬಿಬಿಎಂಪಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್ 13 ರಂದು ಬೆಂಗಳೂರಿನಿAದ ಗ್ರಾಮಕ್ಕೆ ವಾಪಸ್ಸಾಗಿದ್ದಾರೆ. ಇವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬAದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

#ಕೊಪ್ಪಳ ತಾಲ್ಲೂಕಿನ ಹಂದ್ರಾಳ ಗ್ರಾಮದ 30 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಜೂನ್ 06 ರಂದು ಬಳ್ಳಾರಿಯಿಂದ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದ 25 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು ಇವರು ಬಳ್ಳಾರಿಯ ಜಿಂದಾಲ್ ಉದ್ಯೋಗಿಯಾಗಿದ್ದು, ಜೂನ್ 10 ರಂದು ಗ್ರಾಮಕ್ಕೆ ಆಗಮಿಸಿದ್ದಾರೆ. ತಾಲ್ಲೂಕಿನ ಕಂಪಸಾಗರದ 30 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಜೂನ್ 19 ರಂದು ಹೊಸಪೇಟೆಯಿಂದ ಗ್ರಾಮಕ್ಕೆ ಆಗಮಿಸಿದ್ದಾರೆ. ತಾಲ್ಲೂಕಿನ ತಿಗರಿ ಗ್ರಾಮದ 26 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಯಾವುದೇ ಪ್ರಯಾಣ ಹಿನ್ನೆಲೆಯನ್ನು ಹೊಂದಿಲ್ಲ. ಸೋಂಕಿನ ಲಕ್ಷಣಗಳು ಕಂಡುಬAದ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಮೈನಳ್ಳಿಯ 40 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಬಳ್ಳಾರಿಗೆ ಪ್ರಯಾಣ ಮಾಡಿದ್ದರು.

#ಯಲಬುರ್ಗಾದ ಶಿರೂರು ಗ್ರಾಮದ 38 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಯಾವುದೇ ಪ್ರಯಾಣ ಹಿನ್ನೆಲೆಯನ್ನು ಹೊಂದಿಲ್ಲ. ಸೋಂಕಿನ ಲಕ್ಷಣಗಳು ಕಂಡುಬAದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಕುಕನೂರಿನ 8 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದ್ದು, ಬಾಲಕಿ ಯಾವುದೇ ಪ್ರಯಾಣ ಹಿನ್ನೆಲೆ ಹೋಂದಿಲ್ಲ. ಸೋಂಕಿನ ಲಕ್ಷಣಗಳು ಕಂಡುಬAದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

#ಗಂಗಾವತಿಯ 24 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಜೂನ್ 16 ರಂದು ಬಾಂಬೆಯಿAದ ನಗರಕ್ಕೆ ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

Please follow and like us:
error