ಇಕ್ಬಾಲ್ ಅನ್ಸಾರಿ ಭರ್ಜರಿ ಪ್ರಚಾರ

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಭರ್ಜರಿ ಪ್ರಚಾರ ನಡೆಸಿದ್ರು. ಗಂಗಾವತಿಯ ವಿವಿಧ ವಾರ್ಡಗಳಲ್ಲಿ ಪ್ರಚಾರ ಮಾಡಿದ ಇಕ್ಬಾಲ್ ಅನ್ಸಾರಿ ಬಿಜೆಪಿ ಪಕ್ಷ ಹಾಗೂ ಅಭ್ಯರ್ಥಿಯ ಮೇಲೆ ವಾಗ್ದಾಳಿ ನಡೆಸಿದರು. ಬಿಜೆಪಿ ಗಂಗಾವತಿಯ ಶಾಂತಿ ಕದಡಲು ಯತ್ನ ಮಾಡುತ್ತಿದೆ. ಜಾತಿ, ಧರ್ಮಗಳ ಮದ್ಯೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಅಭಿವೃದ್ಧಿಗೆ ಕಾಂಗ್ರೆಸ್ ಗೆ ಮತ ಹಾಕಿ ಎಂದು ಮತದಾರರಲ್ಲಿ ಕೇಳಿಕೊಂಡರು. ಅಲ್ಲದೇ ಈ ಸಲವೂ ತಮ್ಮ ತಮ್ಮ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.