You are here
Home > Koppal News > ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ

ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ

): ಸರ್ಕಾರಿ ನೌಕರರಿಗೆ ಏರ್ಪಡಿಸಲಾಗುವ ಪ್ರಸಕ್ತ ಸಾಲಿನ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆ ನವೆಂಬರ್. 11 ರಿಂದ 13 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನಲ್ಲಿ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಯು ನವೆಂಬರ್. 11 ರಿಂದ 13 ರವರೆಗೆ ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ಕೊಪ್ಪಳದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ/ ಅವ್ಯವಹಾರ ನಡೆಯದಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳವನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Top