ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಿ : ಕರಡಿ ಸಂಗಣ್ಣ

ಕೊಪ್ಪಳ ಜ. ): ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡುವಂತೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರದಂದು ಆಯೋಜಿಸಲಾಗಿದ ಪ್ರಸಕ್ತ ಸಾಲಿನ 3ನೇ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೀವ್ರ ಬರ ಹಿನ್ನೆಲೆ ಜನರು ಗೂಳೆ ಹೋಗುತ್ತಿದ್ದಾರೆ. ಅಲ್ಲದೇ ಕೂಲಿಕಾರರು ಕೆಲಸವನ್ನು ಕೇಳುತ್ತಿದ್ದಾರೆ. ಅಂತಹ ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ, ಜನ ಗೂಳೆ ಹೋಗುವುದನ್ನು ತಡೆದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸವನ್ನು ಒದಗಿಸಿ ಹಾಗೂ ನರೇಗಾ ಯೋಜನೆಯ ಕುರಿತು ಜನರಿಗೆ ಮಾಹಿತಿ ನೀಡಬೇಕು. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಕೊಪ್ಪಳ ತಾಲೂಕಿನ ಹಿರೆಸಿಂಧೋಗಿ ರಸ್ತೆಯಲ್ಲಿ ಎರಡು ಸಾವಿರ ಮನೆಗಳ ನಿರ್ಮಾಣ, ಇದರಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡಿಕೊಂಡು ಮನೆಗಳನ್ನು ನಿರ್ಮಿಸಿ ಅರ್ಹ ಫಲಾನುಭವಿಗಳಿಗೆ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕರಡಿ ದಾಮಗಳನ್ನು ನಿರ್ಮೀಸುವಂತೆ ಅರಣ್ಯ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಪ್ಪಳ ತೋಟಗಾರಿಕೆ ಇಲಾಖೆಯು ಮಾವು ಮೇಳ, ಸಸ್ಯ ಮೇಳ, ದ್ರಾಕ್ಷೀ, ಜೇನು ಹೀಗೆ ಅನೇಕ ಮೇಳಗಳನ್ನು ಹಮ್ಮಿಕೊಂಡು ರೈತರ ಸ್ನೇಹಿ ಇಲಾಖೆಯಾಗಿದೆ. ಅಲ್ಲದೇ ಹೊಸ-ಹೊಸ ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳ ಬಗ್ಗೆ ಮಾಹಿತಿ, ಸೌಲಭ್ಯಗಳನ್ನು ನೀಡಿ ಜಿಲ್ಲೆಯಲ್ಲಿ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತೋಟಗಾರಿಕೆ ಇಲಾಖೆಯ ಬಗ್ಗೆ ನಮಗೆ ಗೌರವಿದೆ. ಇದೊಂದು ಮಾದರಿ ಇಲಾಖೆಯಾಗಿದೆ ಎಂದು ಸಂಸದ ಕರಡಿ ಸಂಗಣ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಪ್ರಗತಿ ವರದಿ ನೀಡಿ, ಇಲಾಖೆಯು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ವಿಶೇಷವಾಗಿ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದಲ್ಲಿ 60 ಎಕರೆ ಜಮೀನಿನಲ್ಲಿ ನಿರ್ಮಿಸಿದ ಇಸ್ರೇಲ್ ಮಾದರಿ ತಂತ್ರಾವು ಯಶಸ್ವಿಯಾದಿಯಲ್ಲಿ. ಇದರಿಂದ ನಮ್ಮ ಜಿಲ್ಲೆಯಯು ಒಂದು ಮಾದರಿಯಾದಲಿದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರಗತಿ ವರದಿಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಡಿಎಫ್‍ಒ ಯಶಪಾಲ್ ಕ್ಷೀರಸಾಗರ್, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಜಂಟಿ ಕೃಷಿನಿರ್ದೇಶಕಿ ಶಬಾನ ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಉಮಾದೇವಿ ಸೊನ್ನದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error