ಉಪಚುನಾವಣೆ ಪ್ರಯುಕ್ತ ನ.12 ಸಾರ್ವತ್ರಿಕ ರಜೆ


ಕೊಪ್ಪಳ ನ.  : ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಸ್ಥಾನಗಳಿಗೆ ನವೆಂಬರ್ 12 ರಂದು ಉಪ ಚುನಾವಣೆಯ ಮತದಾನ ನಡೆಯಲಿದ್ದು, ಸರ್ಕಾರದ ಅಧಿಸೂಚನೆಯ ಮೂಲಕ ಉಪ ಚುನಾವಣೆ ನಡೆಯುವ ತಾಲ್ಲೂಕು, ಗ್ರಾಮ ಪಂಚಾಯತಿಗಳ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡAತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಒಳಗೊಂಡAತೆ ಮತದಾನದ ದಿನದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಷ್ಟಗಿ ತಾಲ್ಲೂಕಿನ ತಾಲ್ಲೂಕು ಪಂಚಾಯತ ಕ್ಷೇತ್ರ ಜುಮಲಾಪೂರ-22 ವ್ಯಾಪ್ತಿಗೆ ಒಳಪಡುವ ಜುಮಲಾಪುರ, ಮುದ್ದಲಗುಂದಿ, ನಂದಾಪೂರ, ಅಡವಿಭಾವಿ, ಸಾಸ್ವಿಹಾಳ, ಹಾಗಲದಾಳ. ಐನಾಪೂರ(ಬೇ), ಜಾಗೀರರಾಂಪೂರ, ಮ್ಯಾದರಡೊಕ್ಕಿ ಮತ್ತು ತಾಂಡಾ ಹಾಗೂ ಕೊಪ್ಪಳ ತಾಲ್ಲೂಕಿನ  ಗ್ರಾಮ ಪಂಚಾಯತ್ ಕ್ಷೇತ್ರ ಹುಲಿಗಿ-25ರ ವ್ಯಾಪ್ತಿಗೆ ಬರುವ 7-ಮುನಿರಾಬಾದ-2 ಗ್ರಾಮ ಪಂಚಾಯತ್ ಕ್ಷೇತ್ರಗಳಲ್ಲಿ ಉಪ ಚುನಾವಣೆ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Please follow and like us:
error