ಉಪ್ಪಾರ ಸಮುದಾಯಕ್ಕೆ ಎಸ್ಟಿ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ

ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡ ಮೀಸಲಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಉಪ್ಪಾರ ಸಮಾಜದ ಸಾವಿರಾರು ಜನರು ಕೊಪ್ಪಳ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರದ ಅಶೋಕ ವೃತ್ತದ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗ

ಜಿಲ್ಲಾಡಳಿತನ ಭವನದವರೆಗೂ ಸಾಗಿತು. ಮೆರವಣಿಗೆಯುದ್ದದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿದರು. ರಾಜ್ಯದಲ್ಲಿ ಸುಮಾರು 40 ಲಕ್ಷ ಜನಸಂಖ್ಯೆಯನ್ನು ಉಪ್ಪಾರ ಸಮಾಜ ಹೊಂದಿದೆ. ಈ ಸಮಾಜ ಇನ್ನೂ ಎಲ್ಲ ರೀತಿಯಿಂದಲೂ ಹಿಂದುಳಿದಿದೆ. ಈಗ ಉಪ್ಪಾರ ಸಮಾಜ ಪ್ರವರ್ಗ ಒಂದರಲ್ಲಿದೆ. ಉಪ್ಪಾರ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಬೇಕು. ಇದರಿಂದ ಸಮಾಜ ಒಂದಿಷ್ಟು ಪ್ರಗತಿಹೊಂದಬಹುದು. ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸಿ ಉಪ್ಪಾರ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

Please follow and like us:
error