ಎಸ್‌ಐ ಮತ್ತು ಪಿಎಸ್‌ಐ ಹುದ್ದೆಗಳ ನೇರ ನೇಮಕಾತಿ: ಅರ್ಜಿ ಸಲ್ಲಿಕೆ ತಾತ್ಕಾಲಿಕ ಸ್ಥಗಿತ

ಕೊಪ್ಪಳ, ಜೂ.  :  ಪ್ರಸಕ್ತ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್‌ಇನ್ಸ್ಪೆಕ್ಟರ್ (ಸಿವಿಲ್) 431 ಹಾಗೂ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)(ಕಲ್ಯಾಣಕರ್ನಾಟಕ)-125 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.
ಆಡಳಿತಾತ್ಮಕ ಕಾರಣಗಳಿಂದ ಅರ್ಜಿಗಳ ಆಹ್ವಾನದ ದಿನಾಂಕವನ್ನು ಸ್ಥಗಿತಗೊಳಿಸಿದ್ದು, ಅರ್ಜಿ ಆಹ್ವಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error