ಎಸ್.ಎಸ್.ಎಲ್.ಸಿ ಪರೀಕ್ಷೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ,  : ಜೂನ್.25 ರಿಂದ ಜುಲೈ.04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಂಡು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.
ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಸಿದ್ಧತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ತಾಲ್ಲೂಕಿನಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಿದ್ದು, ಅದರಲ್ಲಿ ಬಾಹ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ 03 ಪರೀಕ್ಷಾ ಕೇಂದ್ರಗಳನ್ನು ಸೂಕ್ಷö್ಮ ಕೇಂದ್ರಗಳೆAದು ಗುರುತಿಸಲಾಗಿದ್ದು, ಈ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನಲ್ಲಿ ಒಟ್ಟು 6,887 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು, ಇದರಲ್ಲಿ  ವಲಸೆ ಬಂದ 87 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ,  ಪರೀಕ್ಷಾ ಕೊಠಡಿಗಳ ಸ್ವಚ್ಛತೆಯನ್ನು ಕಾಪಾಡಲು ಆಯಾ ಸಂಬAಧಪಟ್ಟ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ಅದರ ಜೊತೆ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜರನ್ನು ಸಿಂಪರಣೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಾಸಕರು ಪರೀಕ್ಷಾ ಕೇಂದ್ರಗಳಲ್ಲಿ ನೀಡಲು ಪರೀಕ್ಷಾ ಮುಖ್ಯ ಅಧೀಕ್ಷಕರಿಗೆ ಸ್ಯಾನಿಟೈರ್ ಮತ್ತು ಮಾಸ್ಕ್ಗಳನ್ನು ನೀಡಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಬಾಲಚಂದ್ರ, ತಾಲೂಕ ಪಂಚಾಯತಿ ಇಓ ಟಿ.ವೆಂಕೋಬಪ್ಪ, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ್ ಹಾಗೂ ಪರೀಕ್ಷಾ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error