ಎಸ್.ಎಸ್.ಎಲ್.ಸಿ. ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ : ಅವಧಿ ವಿಸ್ತರಣೆ

ಕೊಪ್ಪಳ ಜ.: ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಸರ್ಕಾರದ ಆದೇಶದನ್ವಯ 2017-18ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು ಕೊನೆಯ ಡಿ. 15 ರವರೆಗೆ ಅವಕಾಶ ಕಲ್ಪಿಸಿದ್ದು, ಆದರೆ ಅವಧಿಯನ್ನು ಜ. 30 ರವರೆಗೆ ವಿಸ್ತರಿಸಲಾಗಿದ್ದು, ಇಲಾಖಾ ವೆಬ್‍ಸ್ಶೆಟ್‍ಗಳಾದ ಪರಿಶಿಷ್ಟ ಜಾತಿಯ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಮತ್ತು ಪರಿಶಿಷ್ಟ ವರ್ಗದ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಉಪನಿರ್ದೇಶಕ ಬಿ.ಕಲ್ಲೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕತೆ ದುಷ್ಪರಿಣಾಮ, ನಿಷೇಧ ಕಾಯ್ದೆ ಕುರಿತು ಜಾಗೃತಿ
ಜ. 16 ರಂದು ಪಿಡಿಓ, ಅಂಗನವಾಡಿ ಮೇಲ್ವಿಚಾರಕರಿಗೆ ಕಾರ್ಯಾಗಾರ : ಡಾ. ವನಿತಾ ತೊರವಿ
ಕೊಪ್ಪಳ ಜ. 06 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಕುರಿತು ಎಲ್ಲಾ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಜ. 16 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಹೇಳಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಬಗ್ಗೆ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯಲ್ಲಿ ಶನಿವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 8, 9 ಹಾಗೂ 10ನೇ ತರಗತಿಯ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜ. 16 ರಿಂದ 30 ರವರೆಗೆ “ಸಂದಿಗ್ಧ” ಚಲನಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಸಹ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಜ. 17 ರಂದು ಬೆಳಿಗ್ಗೆ 09 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಮತ್ತು ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಾಗೃತಿ ಜಾಥಾ ಮತ್ತು ಕಾರ್ಯಕ್ರಮವು ಬಾಲ್ಯ ವಿವಾಹ, ಬಾಲ ಕಾರ್ಮಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಸ್ವಚ್ಛ ಭಾರತ, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಶಾಲೆಯಿಂದ ದೂರ ಉಳಿದ ಮಕ್ಕಳಿಗೆ ಮರಳಿ ಶಾಲೆಗೆ ತರುವ ಕುರಿತು ಅರಿವು ಮೂಡಿಸಲಾಗುವುದು. ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಶ್ರೀ ಗವಿಮಠದ ಸ್ವಾಮೀಜಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ವೆಂಕಟ್‍ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಸೇರಿದಂತೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು, ಚಲನಚಿತ್ರ ನಟ, ನಟಿಯರು ಮತ್ತು ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾಥಾ ಮತ್ತು ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಆಗಮಿಸಿ ಈ ಆಂಧೋಲನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ಯುನೆಸ್ಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ್ ಜೋಗಿ, ವಾರ್ತಾ ಇಲಾಖೆಯ ಎಂ. ಅವಿನಾಶ ಸೇರಿಂದತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
(ಫೋಟೋ ಕಳುಹಿಸಿದೆ)

Please follow and like us:
error