ಎಸ್.ಸಿ.ಪಿ/ ಟಿ.ಎಸ್.ಪಿ ಅನುದಾನ ಸಮರ್ಪಕ ಬಳಕೆ ಮಾಡಿ : ಗೋವಿಂದ ಕಾರಜೋಳ

ಕೊಪ್ಪಳ ಸೆ.  : ವಿವಿಧ ಇಲಾಖೆಗಳಿಗೆ ಎಸ್.ಸಿ.ಪಿ/ ಟಿ.ಎಸ್.ಪಿ ಯಡಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಸೂಚನೆ ನೀಡಿದರು.
ಅವರು ಇಂದು (ಸೆ.20) ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಾದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಅವರಿಗೆ ನೀಡಬೇಕು.  ಈ ಯೋಜನೆಯಡಿ ಯಾವ ಯಾವ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಬಂದಿದೆ ಹಾಗೂ ಬಂದಿರುವ ಅನುದಾನವನ್ನು ಯಾವ ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ವರದಿ ಸಲ್ಲಿಸಬೇಕು.  ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ರುಧ್ರಭೂಮಿ ಸಮಸ್ಯೆಗಳನ್ನು ನಿವಾರಣೆ ಮಾಡಿ.  ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ.  ಅಲ್ಲದೇ ಬೋರ್‌ವೆಲ್‌ಗಳಿಗೆ ಅಗತ್ಯ ವಿದ್ಯುತ್ ಸೌಲಭ್ಯವನ್ನು ಸಹ ನೀಡಬೇಕು.  ಎಸ್.ಸಿ/ ಎಸ್.ಟಿ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ವ್ಯವಸ್ಥೆಯು ಅಚ್ಚುಕಟ್ಟಾಗಿರಬೇಕು.  ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.  2018-19ನೇ ಸಾಲಿನ ಹಾಗೂ ಇತರೆ ಹಿಂದಿನ ಸಾಲಿನ ಯಾವುದೇ ಯೋಜನೆಗಳ ಸೌಲಭ್ಯಗಳು ಬಾಕಿ ಉಳಿಯದಿರಲಿ.  ಅಲ್ಲದೇ ಪ್ರಸಕ್ತ ಸಾಲಿನ ಕಾರ್ಯಕ್ರಮಗಳಲ್ಲಿಯೂ ಸಹ ಫಲಾನುಭವಿಗಳನ್ನು ಆಯ್ಕೆಮಾಡಿ ಅವರಿಗೆ ಶ್ರಿÃಘ ಸೌಲಭ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹಾಗೂ ಇತರೇ ಇಂಜಿನಿಯರಿಂಗ್ ಸಂಸ್ಥೆಗಳಿಂದ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.  ದುರಸ್ಥಿ ಅವಶ್ಯವಿದ್ದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು.  ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು.  ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಅನುದಾನವನ್ನು ರಾಜ್ಯ ಸರ್ಕಾರದಿಂದ ಮಂಜೂರಿಸಲಾಗುವುದು ಎಂದು ಅವರು ಹೇಳಿದರು.
ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಮಾತನಾಡಿ, ತಾಲ್ಲೂಕಿನ ಹಿರೇಬಗನಾಳ ದಿಂದ ಕಾಸನಕಂಡಿ ವರೆಗಿನ ರಸ್ತೆಯು ಸಿ.ಸಿ ರಸ್ತೆಯಾಗಬೇಕಾಗಿದೆ.  ಈ ಭಾಗವು ಕೈಗಾರಿಕ ಪ್ರದೇಶದಿಂದ ಕೂಡಿದ್ದು, ಇಲ್ಲಿ ಭಾರೀ ವಾಹನಗಳ ಓಟಾಟ ಹೆಚ್ಚಾಗಿದೆ.  ಆದ್ದರಿಂದ ಇಲ್ಲಿ ಸಿಸಿ ರಸ್ತೆ ಮಂಜೂರಿಸುವಂತೆ ಮನವಿ ಮಾಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಮಂತ್ರಿಗಳು ಈ ರಸ್ತೆ ಎಷ್ಟು ಕಿ.ಮೀ ಇದೆ.  ಯೋಜನೆ ಅಂದಾಜು ಮೊತ್ತ ಎಷ್ಟಾಗಲಿದೆ ಎಂಬುವುದರ ಕುರಿತು ನಕಾಶೆ ತಯಾರಿಸಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error

Related posts