ಏ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಏ.ಜೆ. ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ಕೊಪ್ಪಳದ ಜಿಲ್ಲಾಡಳಿತ

ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಜಿಲ್ಲಾಡಳಿತ ಭವನದ ದ್ವಾರದಲ್ಲಿಯೇ ಪೊಲೀಸರು ತಡೆದರು. ಜಿಲ್ಲಾಡಳಿತ ಭವನದ ಮುಂದೆ

ಅರೆಬೆತ್ತಲೆ ಹಾಗೂ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನಾಕಾರರು ಆಯೋಗದ ವರದಿಯನ್ನು ಜಾರಿ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈಗಾಗಲೇ ಏ.ಜೆ. ಸದಾಶಿವ ಆಯೋಗದ ವರದಿಯು ಸರ್ಕಾರದ ಬಳಿ ಇದೆ. ಅದನ್ನು ಜಾರಿ ಮಾಡದೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ವರದಿಯನ್ನು ಜಾರಿಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Please follow and like us:
error