ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ : ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ

ಕೊಪ್ಪಳ ಜ.): ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರಿಂದ ನೋಂದಾಯಿಸಿಕೊಳುವ ಅವಧಿಯನ್ನು ವಿಸ್ತರಿಸಲಾಗಿದೆ.
ಸರ್ಕಾರದ ಆದೇಶದನ್ವಯ ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರಗಳನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕಾರಟಗಿ ತಾಲೂಕುಗಳಲ್ಲಿ ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರು ತಮ್ಮ ವ್ಯಾಪ್ತಿಗೆ ಬರುವ ಗಂಗಾವತಿ ಮತ್ತು ಕಾರಟಗಿ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಡಿ. 31 ಅಂತಿಮ ದಿನವಾಗಿತ್ತು. ಆದರೆ ಸರ್ಕಾರದ ಆದೇಶದ ಮೂಲಕ ರೈತರ ಹಿತದೃಷ್ಟಿಯಿಂದ ದಿನಾಂಕವನ್ನು ಪರಿಷ್ಕರಿಸಿ ಅವಧಿಯನ್ನು ಫೆಬ್ರವರಿ. 28 ರವರೆಗೆ ವಿಸ್ತರಿಸಲಾಗಿದೆ. ಈ ಪ್ರಯುಕ್ತ ಗಂಗಾವತಿ ಮತ್ತು ಕಾರಟಗಿ ತಾಲೂಕುಗಳ ಸುತ್ತಮುತ್ತಲಿನ ಜಿಲ್ಲೆಯ ರೈತರು ತಮ್ಮ ಭಾವಚಿತ್ರ, ಪಹಣಿ ಪತ್ರಿಕೆ ಹಾಗೂ ಆಧಾರ ಕಾರ್ಡನ್ನು ಹಾಜರುಪಡಿಸಿ, ತೀವ್ರವಾಗಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
=======

Please follow and like us:
error