You are here
Home > Election_2018 > ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಕಲ್ಲು ತೂರಾಟ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಕಲ್ಲು ತೂರಾಟ

ಕೊಪ್ಪಳ : ಚುನಾವಣೆ ಕಾವು ರಂಗೇರುತ್ತಿದ್ದಂತೆ ಶುರುವಾಗುತ್ತಿದೆ ಅಲ್ಲಲ್ಲಿ ಗಲಾಟೆಗಳು ನಡೆಯುತ್ತಿವೆ

‘ಕೈ’ ಕಮಲ ಕಾರ್ಯಕರ್ತರ ನಡುವೆ ಕಿತ್ತಾಟ ಆರಂಭವಾಗಿದೆ. ಕೊಪ್ಪಳದ ಕನಕಗಿರಿ ತಾಲೂಕಿನ ನವಲಿ ಗ್ರಾಮದಲ್ಲಿ ಬಿಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪ್ರಚಾರದ ವೇಳೆ ಕಾರ್ ಮೇಲೆ ಕಲ್ಲೆಸೆದು ಗಲಾಟೆ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶಿವರಾಜ್ ತಂಗಡಗಿ ಪರ ಕಾರ್ಯಕರ್ತರು ಮತಯಾಚನೆ ವೇಳೆ ಗಲಾಟೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿವೆ‌

ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದರು ಹೀಗಾಗಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಜಗಳವಾಗಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ನವಲಿ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು

ಸ್ಥಳಕ್ಕೆ ಪೊಲೀಸ್ ರ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ

Top