ಕಾಂಗ್ರೆಸ್ ಸಭೆಯಲ್ಲಿ ಹಿಂದೆ ಕೂರಿಸಿದ್ದಕ್ಕೆ ಬೇಸರವಿಲ್ಲಾ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ:ಇಲ್ಲಿನ ಖಾಸಗಿ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ನಿಯಮದಂತೆ ಹಾಲಿ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಮುಂದೆ ಕುಳಿತಿದ್ದರು. ನನಗೆ ಇದರಿಂದ ಯಾವುದೇ ರೀತಿ ಬೇಸರ  ಆಗಿಲ್ಲ, ಎಂದು ಹೇಳಿದ್ದರು.

ಜನವೇದನಾ ಸಮಾವೇಶದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿತ್ತು ಎನ್ನುವ ಮಾತು ಕೇಳಿಬಂದಿತ್ತು. ಸೋತ ನಾಯಕರಿಗೆ ಮೊದಲ ಸಾಲಿನಲ್ಲಿ ಕೂರಿಸಿ ಮನ್ನಣೆ ನೀಡಿದ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕೊನೆಯ ಸಾಲಿನಲ್ಲಿ ಕೂರಿಸಿ ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರಿಗೆ ಸಭೆಯಲ್ಲಿ ಮಾತನಾಡಲು ಅವಕಾಶವನ್ನು ನೀಡಲಿಲ್ಲ ಎಂದೂ ದೂರಲಾಗಿತ್ತು.

Leave a Reply