ಕಾರ್ಯಕರ್ತರಿಗೆ ಸಂಸದರಿಂದ ಹೋಳಿಗೆ ಊಟ

ಮಾತು ಉಳಿಸಿಕೊಂಡ ಕಾರ್ಯಕರ್ತರು | ಕಾರ್ಯಕ್ರಮಕ್ಕೆ ಈಶ್ವರಪ್ಪ ಆಗಮನ

ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಸಂಗಣ್ಣ ಕರಡಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿದರೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಮಸ್ತ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು ಮಾತು ನೀಡಿದ್ದರು. ಅದರಂತೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಲೀಡ್ ಬಿಜೆಪಿಗೆ ಬರುವಂತೆ ದುಡಿದ ಹಿನ್ನೆಲೆಯಲ್ಲಿ ಜೂ. ೧೬ರಂದು ಕಾರ್ಯಕರ್ತರಿಗೆ ಹೋಳಿಗೆ ಊಟ ಮಾಡಿಸುವ ಜೊತೆಗೆ ಸಂಸದ ಸಂಗಣ್ಣ ಕರಡಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ಅಧ್ಯಕ್ಷ ಅಮರೇಶ್ ಕರಡಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ ೧೬ರ ಭಾನುವಾರ ಭಾಗ್ಯನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ

ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಡೆಸೂಗೂರ, ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಕೆ. ಶರಣಪ್ಪ, ಅಂದಣ್ಣ ಅಗಡಿ, ಕೇಸರಟ್ಟಿ ವೀರಪ್ಪ, ರಾಘವೇಂದ್ರ ಪಾನಘಂಟಿ, ಡಿ. ಮಲ್ಲಣ್ಣ, ಜಿಪಂ, ತಾಪಂ, ನಗರಸಭೆ ಸದಸ್ಯರು, ಬಿಜೆಪಿ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು, ಮಹಿಳಾ ಮುಂಖಂಡರು, ಹಿರಿಯರು, ಪ್ರಮುಖರು, ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದರೆ.
ಕಾರ್ಯಕ್ರಮ ನಡೆಯುವ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಶನಿವಾರ ಸಿದ್ಧತೆಗಳ ಕುರಿತು ಹಿರಿಯ ಮುಖಂಡ ಅಂದಣ್ಣ ಅಗಡಿ, ಎಪಿಎಂಸಿ ಸದಸ್ಯ ಬಸವರಾಜ್, ಮುಖಂಡ ಡಿ. ಮಲ್ಲಣ್ಣ, ಮಂಜುನಾಥ ಹಂದ್ರಾಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಹೋಳಿಗೆ ಊಟಕ್ಕೆ ಬೇಕಾದ ಎಲ್ಲಾ ತಯಾರಿ ನಡೆದಿದೆ. ಅಭಿನಂದನಾ ಕಾರ್ಯಕ್ರಮಕ್ಕೆ ಕೊಪ್ಪಳ ಕ್ಷೇತ್ರದ ಎಲ್ಲಾ ಹಂತದ ನಾಯಕರು, ಪದಾಧಿಕಾರಿಗಳು, ಮಹಿಳಾ ಮುಖಂಡರು, ತಾಪೂಲು, ನಗರ ಘಟಕದ ಪದಾಧಿಕಾರಿಗಳು ಹಾಗೂ ಸಮಸ್ತ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಮರೇಶ್ ಕರಡಿ ಮನವಿ ಮಾಡಿದ್ದಾರೆ

Please follow and like us:
error