ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಸೇವಾ ಸಂಸ್ಥೆಗಳು ಹಾಗೂ ಇತರ ಐದು ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಜಿ ಸಲ್ಲಿಸಬಹುದಾಗಿದೆ.
ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ : ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಸೇವೆ ಸಲ್ಲಿಸಿರಬೇಕು. ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡಾ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೂಳ್ಳಲಾಗುವುದು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುವ ವ್ಯಕ್ತಿಗಳು ಅರ್ಹರಾಗಿರುವದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಹಾಗೂ ಆಯ್ಕೆಗೆ ಸಂಬಂದಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಪ್ರಶಸ್ತಿ ಪ್ರಧಾನವನ್ನು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಈ ಪ್ರಶಸ್ತಿಯನ್ನು ಖುದ್ದಾಗಿ ಆಯ್ಕೆಯಾದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯು ಸಂಸ್ಥೆಯ ಪದಾಧಿಕಾರಿಗಳು ಸ್ವೀಕರಿಸಬಹುದು.
ವೀರ ಮಹಿಳೆ ಪ್ರಶಸ್ತಿ : ವೀರ ಮಹಿಳೆ ಪ್ರಶಸ್ತಿಯು ೧೮ ರಿಂದ ೪೫ ವಯೋಮಿತಿಯೊಳಗಿನ ಒಬ್ಬ ಮಹಿಳೆಯು ಅಪತ್ಕಾಲದಲ್ಲಿರುವ ಮತ್ತೋಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಬಹುದು. ಈ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನೇವರಿ ೧ ರಿಂದ ಡಿಸೆಂಬರ್-೩೧ ರ ಒಳಗೆ ಇರಬೇಕು. ಈ ಪ್ರಶಸ್ತಿ ಸಂಬಂದಿಸಿದ ಮಹಿಳೆಯ ತಂದೆ/ ತಾಯಿ/ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು. ಈ ಪ್ರಶಸ್ತಿಗಾಗಿ ಆಯ್ಕೆಯಾದ ಒಬ್ಬ ಮಹಿಳೆಗೆ ರಾಜ್ಯದ ವತಿಯಿಂದ ರೂ. ೨೫೦೦೦/-ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.
ಅರ್ಜಿ ಸಲ್ಲಿಸಲು ಜ. ೧೫ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ .

Please follow and like us:
error