ಕಿನ್ನಾಳ : ಸರಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ೧೧ ಕೊಠಡಿಗಳ ಉದ್ಘಾಟನೆ

ಕೊಪ್ಪಳ : ತಾಲೂಕಿನ ಕಿನ್ನಾಳ ಗ್ರಾಮದ ಸರಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆರ್.ಎಮ್.ಎಸ್.ಎ ಅನುದಾನದ ಅಡಿಯಲ್ಲಿ ನಿರ್ಮಿಸಲಾದ ೧೧ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮವನ್ನು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಮತ್ತು ಜಿಲ್ಲಾ ಪಂಚಾಯತ ಸದಸ್ಯ ಶ್ರೀ ಗವಿಸಿದ್ದಪ್ಪ ಕರಡಿ, ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಚೆನ್ನಮ್ಮ ವಾಲ್ಮೀಕಿ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಕಾಲೇಜು ಸಿಬ್ಬಂದಿ, ಪ್ರೌಢಶಾಲಾ ವಿಭಾಗದ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸರ್ವ ಸದಸ್ಯರು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.
ನಂತರ ಉದ್ಘಾಟನಾ ನುಡಿಗಳನ್ನಾಡಿದ ಶಾಸಕ ಪರಣ್ಣ ಮುನವಳ್ಳಿ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗದಲ್ಲಿ ಸುಮಾರು ೭೪೦ ವಿದ್ಯಾರ್ಥಿಗಳಿದ್ದು, ಅವರ ಮೂಲಭೂತ ಸೌಲಭ್ಯಗಳ ಕುರಿತು ನೀಡಿದ ಬೇಡಿಕೆಯನ್ನು ಸ್ವೀಕರಿಸಿ ಈ ಕೂಡಲೇ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕರ ಅನುದಾನದಲ್ಲಿ ನಿರ್ಮಿಸಿಕೊಡುವುದಾಗಿ ಹೇಳಿದರು ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಾರಾಯಣಪ್ಪ ಚಿತ್ರಗಾರ ಮುಖ್ಯೋಪಾಧ್ಯಾಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾದಿನೂರ ಹಾಗೂ ಸುಮಾರು ೫೦ ಶಾಲೆಗಳಲ್ಲಿ ಪ್ರತಿ ವರ್ಷ ಶಾಲೆಗಳ ಬೇಡಿಕೆಗಳಿಗೆ ಅನುಗುಣವಾಗಿ ಊಟದ ತಟ್ಟೆಗಳನ್ನು ವಿತರಿಸುವ ದಾನಿಗಾಳದ ಅಶೋಕ ಅಂಗಡಿ ಸಾ. ಬಿಸರಳ್ಳಿ ಇವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಿನ್ನಾಳ ಗ್ರಾಮದ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತ ಸದಸ್ಯರು, ಗ್ರಾಮದ ಹಿರಿಯರು, ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಎಲ್ಲಾ ಉಪನ್ಯಾಸರು/ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Please follow and like us:
error