ಕೆ.ಡಿ.ಪಿ. ಸಭೆ ಔಪಚಾರಿಕ ಸಭೆ ಆಗಬಾರದು : ಬಿ.ಸಿ. ಪಾಟೀಲ್

ಕೊಪ್ಪಳ ಮೇ. 18  : ನಾನು ಸಚಿವನಾದ ಮೇಲೆ ಇದು ಮೊದಲನೇ ತ್ರೆöÊಮಾಸಿಕ  ಸಭೆಯಾಗಿದ್ದು, ಇದು ಔಪಚಾರಿಕ ಸಭೆ ಆಗದೆ, ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಕಾರ್ಯರೂಪಕ್ಕೆ ಬರಬೇಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಹೇಳಿದರು.
ಇಂದು ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ 4ನೇ ತ್ರೆöÊಮಾಸಿಕ ಕೆ.ಡಿ.ಪಿ. ಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದಿನ ಸಭೆಯಲ್ಲಿ ಇದುವರೆಗೂ ಏನೇನು ಕೊಟ್ಟಿದ್ದೀರಿ, ಯಾವ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ ಎಂಬ ಮಾಹಿತಿಯನ್ನು ನಿಖರವಾಗಿ ತಿಳಿಸಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಯಲಬುರ್ಗಾ ತಾಲ್ಲೂಕಿನ ಮಂಗಳೂರು ಹಾಸ್ಟೆಲ್ ಕಟ್ಟಡ ಸೇರಿದಂತೆ ಇತರೆ ಕಾಮಗಾರಿಗಳಲ್ಲಿ ಹಣದ ದುರುಪಯೋಗ, ಅವ್ಯವಹಾರದ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಮಗ್ರ ತನಿಖೆಗೆ ಕ್ರಮ ಕೈಗೊಂಡು ವರದಿ ಸಲ್ಲಿಸಿ. ಕಳೆದ 3ನೇ ಕೆ.ಡಿ.ಪಿ ಸಭೆಯಲ್ಲಿ ಮಂಗಳೂರು ಹಾಸ್ಟೆಲ್‌ನಲ್ಲಿನ ಅವ್ಯವಸ್ಥೆ ಕುರಿತು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ಪ್ರಸ್ತಾಪ ಮಾಡಿ, ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದ್ದರೂ ಕೂಡ ಇದುವರೆಗೂ ಅಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಆದ್ದರಿಂದ ಈ ಕುರಿತು ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ಕೈಗೊಂಡು ವರದಿ ಸಲ್ಲಿಸಿ. ಕೇವಲ ಮಂಗಳೂರು ಮಾತ್ರವಲ್ಲ ಜಿಲ್ಲೆಯ ಯಾವುದೇ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಈ ತರಹದ ಅವ್ಯವಸ್ಥೆ ಕಂಡು ಬಂದಲ್ಲಿ ಆ ಕುರಿತು ವರದಿ ಸಲ್ಲಿಸಿ ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಇನ್ನೂ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸೋಂಕಿತರ  ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರ ಆರೋಗ್ಯ ತಪಾಸಣೆ ಕೈಗೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಿ. ಅಗತ್ಯವಿರುವ ಲ್ಯಾಬ್‌ನ್ನು ಶೀಘ್ರ ಸಿದ್ಧಗೊಳಿಸಿ. ಅಗತ್ಯ ಪ್ರಮಾಣದ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡು ಸೋಂಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಣೆ ಮಾಡಿರುವುದರಿಂದ ಸಾಮಾನ್ಯ ರೋಗಿಗಳು ಜಿಲ್ಲಾಡಳಿತ ಗುರುತಿಸಿರುವ ಪರ್ಯಾಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಿದ್ದಾರೆ. ಅಲ್ಲದೇ ಜಿಲ್ಲಾಡಳಿತ ಗುರುತಿಸಿರುವ ಖಾಸಗಿ ಆಸ್ಪತ್ರೆಗಳ ಕುರಿತು ಸಾರ್ವಜನಿಕರಿಗೆ ಪೂರ್ಣ ಮಾಹಿತಿಯೂ ಇಲ್ಲ. ಆದ್ದರಿಂದ ಕೋವಿಡ್ ಆಸ್ಪತ್ರೆಯಲ್ಲಿ ಅರ್ಧ ಭಾಗವನ್ನು ಸಾಮಾನ್ಯ ರೋಗಿಗಳ ತಪಾಸಣೆ ಹಾಗೂ ಚಿಕಿತ್ಸೆಗೆ ಮೀಸಲಿಡಿ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್ದಾರರಿಗೆ ನೀಡುವ ಪಡಿತರ ಅಕ್ಕಿಯನ್ನು ಕೆಲವರು ಹೆಚ್ಚಿನ ದರಕ್ಕೆ ಮಿಲ್‌ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಮಿಲ್‌ನವರು ಅವುಗಳನ್ನು ಪಾಲಿಶ್ ಮಾಡಿ ಕೆ.ಜಿ.ಗೆ ರೂ. 25 ರಂತೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ಆದ್ದರಿಂದ ಪಡಿತರ ವಿತರಣೆ ಸಮಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಚ್ಚರ ವಹಿಸಬೇಕು. ಇತ್ತೀಚೆಗೆ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಅಷ್ಟು ದೊಡ್ಡ ಪ್ರಮಾಣದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲು ಕಾರಣವಾದ ಸಂಗತಿಗಳ ಮೂಲವನ್ನು ಹುಡುಕಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಪ್ರಸ್ತುತ ವಲಸೆ ಕಾರ್ಮಿಕರಿಗೆ ಪಡಿತರವನ್ನು ವಿತರಿಸಲು ಸರ್ಕಾರ ಸೂಚಿಸಿರುವುದರಿಂದ, ಸರ್ಕಾರದ ಮಾನದಂಡಗಳನ್ನು ಅನುಸರಿಸಿ ವಲಸೆ ಕಾರ್ಮಿಕರಿಗೆ ಪಡಿತರವನ್ನು ವಿತರಿಸಿ ಎಂದು ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಶಿಥಿಲ ಶಾಲಾ ಕಟ್ಟಡಗಳ ನೆಲಸಮ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ. ಕಳೆದ ಶೈಕ್ಷಣಿಕ ವರ್ಷದಲ್ಲಿ ಕಳಪೆ ಸೈಕಲ್ ವಿತರಿಸಲಾಗಿದೆ ಎಂದು ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಆರೋಪ ಮಾಡುತ್ತಿದ್ದು ಈ ಕುರಿತು ಆಯುಕ್ತರಿಗೆ ಪತ್ರ ಬರೆಯಿರಿ. ಪ್ರಸಕ್ತ ಸಾಲಿನಲ್ಲಿ ಶಾಲಾ ಸಮವಸ್ತç ವಿತರಣೆಯಲ್ಲಿ ಲೋಪಗಳಾಗದಂತೆ ಎಚ್ಚರ ವಹಿಸಿ. ಸರಿಯಾದ ಸಮಯಕ್ಕೆ ಸಮವಸ್ತç ವಿತರಣೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಅನಗತ್ಯ ಹಾಗೂ ಅವೈಜ್ಞಾನಿಕ ಹಂಪ್‌ಗಳನ್ನು ನಿರ್ಮಿಸಿರುವುದರಿಂದ ಅಪಘಾತಗಳು ಉಂಟಾಗುತ್ತವೆ. ಅಂತಹ ಗ್ರಾಮಗಳನ್ನು ಗುರುತಿಸಿ ಅವೈಜ್ಞಾನಿಕ ಹಂಪ್‌ಗಳನ್ನು ತೆರವುಗೊಳಿಸಿ. ಹಾಗೆಯೇ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿದ ರಸ್ತೆಗಳನ್ನು ಅಗೆಯುವುದು, ಅಳವಡಿಸಿರುವ ಪೈಪ್‌ಗಳನ್ನು ಕಿತ್ತು ಬಿಸಾಕುವುದು ಅಥವಾ ಸ್ವಂತ ಕೆಲಸಕ್ಕೆ ಬಳಕೆ ಮಾಡುತ್ತಿರುವುದು ಕಂಡುಬAದಿರುವುದಾಗಿ ಆರೋಪ ಕೇಳಿಬಂದಿದ್ದು,  ಅಂತವರ ವಿರುದ್ಧ ದಂಡ ವಸೂಲಿ ಮಾಡಿ, ರಸ್ತೆ ಅಗೆಯುವುದು ಅಥವಾ ಪೈಪ್‌ಗಳನ್ನು ಕೀಳುವುದನ್ನು ತಡೆಯಿರಿ.  ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿರಿ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗೆ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಉದ್ಯೋಗಿನಿ ಯೋಜನೆಯಲ್ಲಿ 102 ಅರ್ಜಿಗಳು ಬಂದಿದ್ದು, ಆದರಲ್ಲಿ 82 ಅರ್ಜಿಗಳನ್ನು ಬ್ಯಾಂಕಿಗೆ ಸಲ್ಲಿಸಲಾಗಿದೆ ಮತ್ತು ಭಾಗ್ಯ ಲಕ್ಷಿö್ಮ ಯೋಜನೆಯ ಬಾಂಡ್‌ನ್ನು ಎಲ್ಲರಿಗೂ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1300 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡವನ್ನು ಹೊಂದಿದ್ದು, 800 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯಲ್ಲಿ ಬೆಳೆ ವಿಮೆಯ ಮಾಹಿತಿ ನೀಡಲು ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ ಒಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ನರೇಗಾ ಕಾಮಗಾರಿಗಳನ್ನು ಸುಗಮವಾಗಿ ನಡೆಸುವಂತೆ ಹಾಗೂ ಪ್ರತಿಯೊಬ್ಬ ಅಧಿಕಾರಿ ನಿಗದಿತ ಅವಧಿಯಲ್ಲಿ ಕೆಲಸ ನಿರ್ವಹಿಸುವಂತೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್ ಸಚಿವರಿಗೆ ಮಾಹಿತಿ ನೀಡಿದರು.
ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ತೆಗೆದುಕೊಳ್ಳಬೇಕು ಹಾಗೂ ಅದನ್ನು ನಿಗದಿ ಪಡಿಸಿದ ಬೆಲೆಗೆ ಮಾರಾಟ ಮಾಡುವಂತೆ ಕ್ರಮ ಜರುಗಿಸಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿ ಅರುಣ ಕುಮಾರ್ ಅವರಿಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷ ಎಚ್. ವಿಶ್ವನಾಥ ರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ಸಂಗೀತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error