You are here
Home > Koppal News > ಕೇಂದ್ರ ಪುರಸ್ಕೃತ ಯೋಜನೆ : ಅ. ೨೨ ರಂದು ಜಿಲ್ಲಾ ಉಸ್ತುವಾರಿ ಸಮಿತಿ ಸಭೆ

ಕೇಂದ್ರ ಪುರಸ್ಕೃತ ಯೋಜನೆ : ಅ. ೨೨ ರಂದು ಜಿಲ್ಲಾ ಉಸ್ತುವಾರಿ ಸಮಿತಿ ಸಭೆ

ಕೊಪ್ಪಳ ಅ. ೧೭  :  ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಅ. ೨೨ ರಂದು ಮಧ್ಯಾಹ್ನ ೩ ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸರ್ವಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಮಧ್ಯಾಹ್ನ ಉಪಹಾರ ಹಾಗೂ ಸಾಕ್ಷರ ಭಾರತ ಯೋಜನೆಗಳ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನೆಗಾಗಿ ಕೇಂದ್ರ ಪುರಸ್ಕೃತ ಯೋಜನೆ ಕೊಪ್ಪಳ ಅಧ್ಯಕ್ಷರು ಆಗಿರುವ ಸಂಸದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಅ. ೨೨ ರಂದು ಮಧ್ಯಾಹ್ನ ೩ ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಜಿಲ್ಲೆಯ ವಿಧಾನ ಸಭೆ/ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ವಿವಿಧ ಸಮನ್ವಯ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಣ ಸೇವಾ ಸಂಸ್ಥೆಯ ಇಬ್ಬರು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು  ತಿಳಿಸಿದ್ದಾರೆ.

Top