ಕೇಂದ್ರ ಪುರಸ್ಕೃತ ಯೋಜನೆ : ಜಿಲ್ಲಾ ಉಸ್ತುವಾರಿ ಸಮಿತಿ ಸಭೆ ಮುಂದೂಡಿಕೆ

ಕೊಪ್ಪಳ ಅ. ೨೨ : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನೆಗಾಗಿ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ನವೆಂಬರ್. ೦೨ ಕ್ಕೆ ಮುಂದೂಡಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸರ್ವಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಮಧ್ಯಾಹ್ನ ಉಪಹಾರ ಹಾಗೂ ಸಾಕ್ಷರ ಭಾರತ ಯೋಜನೆಗಳ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನೆಗಾಗಿ ಕೇಂದ್ರ ಪುರಸ್ಕೃತ ಯೋಜನೆ ಕೊಪ್ಪಳ ಅಧ್ಯಕ್ಷರು ಆಗಿರುವ ಸಂಸದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾಗಿತ್ತು. ಆದರೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಗೈರಹಾಜರಾಗಿರುವ ಕಾರಣ ಜಿ.ಪಂ. ಸದಸ್ಯರು ಸಭೆಯನ್ನು ಮುಂದೂಡುವಂತೆ ಕೋರಿದ್ದು, ಸಭೆಯ ಅಧ್ಯಕ್ಷರು ಸಭೆಯನ್ನು ಮುಂದೂಡಿದ್ದಾರೆ.
ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ನವೆಂಬರ್. ೦೨ ರಂದು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ  ತಿಳಿಸಿದ್ದಾರೆ.

Please follow and like us:
error