ಕೊಪ್ಪಳದಲ್ಲಿ ದಿ.20 ರಂದು ಕವಿ ಸರ್ವಜ್ಞ ಜಯಂತಿ ಆಚರಣೆ

​   ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕವಿ ಸರ್ವಜ್ಞ ಜಯಂತಿಯನ್ನು ಫೆ.20 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರಸಭೆ ಎದುರುಗಡೆ ಇರುವ ಶಾದಿ ಮಹಲ್‍ನಲ್ಲಿ ಏರ್ಪಡಿಸಲಾಗಿದೆ.

 ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಉದ್ಘಾಟನೆ ನೆರೆವೇರಿಸುವರು.  ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ,   ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ ಹಾಗೂ ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು.

ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂಗಮೇಶ ಉಪಾಸೆ ಅವರು, ಕವಿ ಸರ್ವಜ್ಞರ ಕುರಿತು ವಿಶೇಷ ಉಪನ್ಯಾಸ ನೀಡುವರು.  ವೇದಿಕೆ ಕಾರ್ಯಕ್ರಮದ ನಂತರ ಕವಿ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. 

Leave a Reply