ಕೋಳಿ ಶೀತ ಜ್ವರ, ಹಕ್ಕಿಜ್ವರ ಮುಂಜಾಗ್ರತಾ ಕ್ರಮವಹಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ  : ಕೇರಳ, ಹಿಮಾಚಲ ಪ್ರದೇಶದಲ್ಲಿ ಕೋಳಿ ಶೀತ ಜ್ವರದ ರೋಗೋದ್ರೇಕವಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮವನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಾರ್ವಜನಿಕರು ಮತ್ತು ಕೋಳಿ ಸಾಕಾಣಿಕೆದಾರರಿಗೆ ಸೂಚಿಸಿದ್ದಾರೆ.
ಹಕ್ಕಿಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಎವಿಯನ್ ಇನ್-ಫ್ಲೂ-ಎಂಜಾ ಎಂಬ ವೈರಾಣುವಿನಿಂದ ಬರುತ್ತದೆ. ಕೋಳಿ ಶೀತ ಜ್ವರವು ನಾಟಿಕೋಳಿ, ಟರ್ಕಿ ಕೋಳಿ, ಕೌಜುಗನ ಹಕ್ಕಿ, ನವಿಲಹಕ್ಕಿ, ಬಾತುಕೋಳಿ, ಹಂಸಪಕ್ಷಿ, ಬಾತುಕೋಳಿ ಮುಂತಾದ ಕೋಳಿ ವಿವಿಧ ಪ್ರಬೇದಗಳಲ್ಲಿ ಅಷ್ಟೇ ಅಲ್ಲದೇ ಮನುಷ್ಯನೊಳಗೊಂಡAತೆ ಎಲ್ಲಾ ಬಿಸಿರಕ್ತ ಪ್ರಾಣಿಗಳಲ್ಲಿ ಕಂಡು ಬರುತ್ತದೆ.
ಕೋಳಿ ಅಥವಾ ಪಕ್ಷಿಗಳಲ್ಲಿ ಹಠಾತ್ ಸಾವು, ಅಸಾದರಣ ಸಾವು, ಮೂಗು, ಬಾಯಿ ಮತ್ತು ಕಣ್ಣಿನಿಂದ ನೀರು ಸುರಿಯುವುದು, ಕೋಳಿಗಳ ಮೊಣಕಾಲು ಮತ್ತು ಪಾದಗಳು ನೀಲಿ ಬಣ್ಣಕ್ಕೆ ತಿರುಗುವುದು ಈ ರೋಗದ ಲಕ್ಷಣಗಳಾಗಿವೆ. ಮತ್ತು ಸರಿಯಾಗಿ ಬೇಯಿಸಿದ ಕೋಳಿ ಮಾಂಸ ಮತ್ತು ಮೊಟ್ಟೆಗಳ ಸೇವನೆಯಿಂದ, ಸೂಕ್ತ ಆರೋಗ್ಯ ಕವಚವನ್ನು ಧರಿಸದೇ ರೋಗ ಪೀಡಿತ ಕೋಳಿ ಮತ್ತು ಕಲುಷಿತ ಸಲಕರಣೆಗಳ ಸಂಪರ್ಕದಿAದ ಈ ರೋಗ ಹರಡುವ ಸಾಧ್ಯತೆಯಿರುತ್ತದೆ.
ಕೋಳಿ ಸಾಕಾಣಿಕೆದಾರರು, ಜಿಲ್ಲೆಯಿಂದ ಹೊರಗೆ ಹಾಗೂ ಹೊರಗಿನಿಂದ ಪ್ರವೇಶಿಸುವ ಸೋಂಕಿತ ಕೋಳಿ, ಉತ್ಪನ್ನಗಳು, ಕೋಳಿ ಆಹಾರ, ಸಂಬAಧಿತ ಪರಿಕರಗಳು ಹಾಗೂ ಸಾಗಾನಿಕೆ ವಾಹನಗಳನ್ನು ಸೋಂಕು ನಿವಾರಿಕಗಳಿಂದ ಸಿಂಪಡಿಸಿದ ನಂತರವೇ ಚಲನ-ವಲನಕ್ಕೆ ಕ್ರಮ ವಹಿಸಬೇಕು. ತಮ್ಮ ಪ್ರದೇಶವನ್ನು ಶುಚಿಯಾಗಿಟ್ಟುಕೊಂಡು, ನಿಯಮಿತವಾಗಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು. ವಲಸೆ ಬರುವ ಅಥವಾ ಅಲ್ಲೇ ವಾಸಿಸುವ ಹಕ್ಕಿ ಪಕ್ಷಿಗಳು ಪ್ರವೇಶಿಸದಂತೆ ಆಹಾರ, ಕುಡಿಯುವ ನೀರಿನ ಸಂಪರ್ಕಕ್ಕೆ ಬರದಂತೆ ಕ್ರಮವಹಿಸಬೇಕು. ಅಸಹಜ ಸಾವು ಸಂಭವಿಸಿದ್ದಲ್ಲಿ ತಕ್ಷಣವೇ ಫಾರಂ ವ್ಯಾಪ್ತಿಗೊಳಪಡುವ ಅಥವಾ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಮಾಹಿತಿ ನೀಡಬೇಕು.
ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಅಸಹಜ ಸಾವನ್ನಪ್ಪಿದರೆ, ತಕ್ಷಣವೇ ಹತ್ತಿರದ ಪಶುವೈದ್ಯರು ಅಥವಾ ಸಿಬ್ಬಂದಿಯವರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ರೋಗ ನಿಯಂತ್ರಣ ಹಾಗೂ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಕೋಳಿ ಫಾರಂಗಳಿಗೆ ಅನುಮತಿಯಿಲ್ಲದೇ ಪ್ರವೇಶಿಸಬಾರದು. ಕೆರೆ, ಕಟ್ಟೆ, ನೀರಿನ ತೋರೆ, ನದಿ ಮತ್ತು ಇತರೆ ನೀರಿನ ಜಾಗಕ್ಕೆ ವಲಸೆ ಬರುವ ಅಥವಾ ಅಲ್ಲಿಯೇ ವಾಸಿಸುವ ಹಕ್ಕಿ ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯಕೀಯ ಇಲಾಖೆಯ ಗಮನಕ್ಕೆ ತರಬೇಕು. ಕೋಳಿ ಮತ್ತು ಕೋಳಿ ಉತ್ಪನ್ನಗಳು ಮುಟ್ಟಿದ್ದಲ್ಲಿ ಸೋಪಿನಿಂದ ಕೈತೊಳೆಯಬೇಕು. 70 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ಹತ್ತು ನಿಮಿಷ ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಬೇಯಿಸಿ ಸೇವಿಸಬೇಕು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು.
ಅವಶ್ಯಕತೆಯಿದ್ದಲ್ಲಿ, ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಕೊಪ್ಪಳ ಮೊ.ಸಂ. 9902135800, ಗಂಗಾವತಿ ಮೊ.ಸಂ. 9972709497, ಕುಷ್ಟಗಿ ಮೊ.ಸಂ. 8123972794 ಹಾಗೂ ಯಲಬುರ್ಗಾ ಮೊ.ಸಂ. 9620022851, ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error