ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಮೇ. : ಕರ್ನಾಟಕ ಸರ್ಕಾರದ ಕೃಷಿ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಮೇ.18 ಮತ್ತು 19 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಸಚಿವರು ಮೇ.17 ರಂದು ಸಂಜೆ 5 ಗಂಟೆಗೆ ಹಿರೇಕೆರೂರಿನಿಂದ ರಸ್ತೆ ಮೂಲಕ ಪ್ರಯಾಣಿಸಿ ರಾತ್ರಿ 09 ಗಂಟೆಗೆ ಮುನಿರಾಬಾದ್‌ಗೆ ತಲುಪಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಮೇ.18 ರಂದು ಬೆಳಿಗ್ಗೆ 9 ಗಂಟೆಗೆ ಮುನಿರಾಬಾದ್‌ನಿಂದ ಕೊಪ್ಪಳಕ್ಕೆ ಆಗಮಿಸಿ, ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯ ಪೂಜಾ ಕಾರ್ಯಕ್ರಮ ನೆರವೇರಿಸುವರು. ನಂತರ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೆ.ಡಿ.ಪಿ ಸಭೆ ನಡೆಸುವರು. ಸಂಜೆ 6 ಗಂಟೆಗೆ ಕೊಪ್ಪಳದಿಂದ ಮುನಿರಾಬಾದ್‌ಗೆ ತೆರಳಿ ವಾಸ್ತವ್ಯ ಮಾಡುವರು.
ಮೇ.19 ರಂದು ಬೆಳಗ್ಗೆ 9 ಗಂಟೆಗೆ ಮುನಿರಾಬಾದ್‌ನಿಂದ ರಸ್ತೆ ಮಾರ್ಗವಾಗಿ ಗಂಗಾವತಿಗೆ ಪ್ರಯಾಣಿಸುವರು. ಬೆ. 9.30 ಗಂಟೆಗೆ ಗಂಗಾವತಿಯ ರೈಸ್ ಟೆಕ್ ಪಾರ್ಕ್ಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಕೊಠಡಿಯಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಸಿ.ಎಲ್.ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error