ಕೊಪ್ಪಳ ಜಿಲ್ಲೆಯಲ್ಲಿ ಇಲಿಜ್ವರ 6 ಪ್ರಕರಣ ಪತ್ತೆ : ಜನತೆ ವಹಿಸಬೇಕಿದೆ ಎಚ್ಚರ

ಕೊಪ್ಪಳ: ಕೊರೋನಾ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಈ ದಿನಗಳಲ್ಲಿ ಈಗ ಇಲಿಜ್ವರವೂ ಕಾಲಿಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಲಿಜ್ವರದ ಒಟ್ಟು ಆರು ಪ್ರಕರಣಗಳು ಖಚಿತವಾಗಿದ್ದು, ಇದರಲ್ಲಿ ಕೊಪ್ಪಳ ತಾಲೂಕಿನಲ್ಲಿ ಐದು ಹಾಗೂ ಕುಷ್ಟಗಿ ತಾಲೂಕಿನಲ್ಲಿ ಒಂದು ಪ್ರಕರಣ ದೃಢಪಟ್ಟಿವೆ. ಕೊಪ್ಪಳ ತಾಲೂಕಿನ ಹೊಸಳ್ಳಿಯಲ್ಲಿ ಎರಡು, ಹೊಸಲಿಂಗಾಪುರ, ಕೆರೆಹಳ್ಳಿ ಹಾಗೂ ನರೇಗಲ್ ಗ್ರಾಮಗಳಲ್ಲಿ ತಲಾ ಒಂದು ಹಾಗೂ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಒಂದು ಇಲಿಜ್ವರ ಪ್ರಕರಣ ಪತ್ತೆಯಾಗಿವೆ. ಹಾಗಾಗಿ ಜಿಲ್ಲಾ ಆರೋಗ್ಯ‌ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಕೋರಿದ್ದು, ವಹಿಸಬೇಕಾದ ಮುನ್ನೆಚ್ಚರಿಕೆ, ಇಲಿಜ್ವರದ ಗುಣಲಕ್ಷಣಗಳನ್ನು ತಿಳಿಸಿದೆ.


ಇಲಿಜ್ವರ ಪತ್ತೆಯಾಗಿರುವುದು ಸತ್ಯ. ಲೆಫ್ಟೋಸ್ವೈರೋಸಿಸ್ ಎಂಬುದು ಇದರ ವೈಜ್ಞಾನಿಕ ಹೆಸರು. ಇಲಿಜ್ವರ ಎಂದಾಕ್ಷಣ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯ‌ ಇಲ್ಲ. ವಿಶೇಷವಾಗಿ ಕಾಮಾಲೆ ಜ್ವರದ ಗುಣಲಕ್ಷಣ ಇರುವವರು ನಿರ್ಲಕ್ಷ್ಯ ಮಾಡುವಂತಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡಿದರೆ ವಾಸಿಯಾಗುವ ಕಾಯಿಲೆ ಇದು.
-ಡಾ.ಲಿಂಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಕೊಪ್ಪಳ.

Please follow and like us:
error