ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್!

ಚಿಕ್ಕಜಂತಕಲ್ ಗ್ರಾಮದಲ್ಲಿ ನೂರು ಮೀಟರ್ ಸೀಲ್‌ಡೌನ್

ಕೊಪ್ಪಳ: ಕೊಪ್ಪಳದಲ್ಲಿ ಈವರೆಗೆ ಐದು ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದು, ಮೂವರು ಗುಣಮುಖರಾಗಿದ್ದಾರೆ. ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ‌ ತಾಲೂಕಿನ ಚಿಕ್ಕಜಂತಕಲ್ ಗ್ರಾಮದಲ್ಲಿ ಓರ್ವ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಗ್ರಾಮದ 28 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದು,
ಮಹಿಳೆಯ ಪತಿ, ಮಕ್ಕಳು ಸೇರಿ 5 ಜನರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಗುರುತಿಸಲಾಗಿದೆ. ಮಹಿಳೆಯ ಅಣ್ಣನ ಮನೆಯವರು ಸೇರಿ ನಾಲ್ವರನ್ನು ದ್ವಿತೀಯ ಸಂಪರ್ಕಿತರು ಎಂದು ಪತ್ತೆ ಹಚ್ಚಲಾಗಿದೆ. ಕೊರೊನಾ ಸೋಂಕಿತ ಮಹಿಳೆ ಗಂಗಾವತಿಯ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಗೂ ಭೇಟಿ ನೀಡಿರುವ ಬಗ್ಗೆ ಮಾಹಿತಿ ದೊರಕಿದ್ದು, ಜಿಲ್ಲಾಡಳಿತ CDR ಮೂಲಕ ಸಂಪರ್ಕ ಪತ್ತೆ ಹಚ್ಚುತ್ತಿದೆ.
ಬಳ್ಳಾರಿ ಜಿಲ್ಲೆಯ ಎಮ್ಮಿಗನೂರ ಗ್ರಾಮಕ್ಕೆ ಹೋಗಿ ಬಂದಿರುವ ಈ ಮಹಿಳೆ, ಗ್ರಾಮಕ್ಕೆ ಮರಳಿದಾಗ ಕೆಮ್ಮುವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ತೆರಳಿ ಸ್ವ್ಯಾಬ್ ಟೆಸ್ಟ್ ಕೊಟ್ಟು ಬಂದಿದ್ದು, ಇದೀಗ ಕೊರೊನಾ ದೃಢಪಟ್ಟಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಜಂತಕಲ್ ಗ್ರಾಮದಲ್ಲಿ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ಮಹಿಳೆ ಗ್ರಾಮಕ್ಕೆ ಬಂದ ನಂತರ ಕೂಲಿ ಕೆಲಸಕ್ಕೂ ಹೋಗಿ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ.

Please follow and like us:
error