ಕೊಪ್ಪಳ ಜಿಲ್ಲೆಯ ಕೃಷಿ ಸಮಗ್ರ ಚಿತ್ರಣವನ್ನೇ ಬದಲಾಯಿಸುತ್ತೇನೆ : ಬಿ.ಸಿ. ಪಾಟೀಲ್


ಕೊಪ್ಪಳ : ಕೊಪ್ಪಳ ಜಿಲ್ಲೆಯನ್ನು ಕೃಷಿಯಲ್ಲಿ ಇಡೀ ಭಾರತದಲ್ಲಿಯೇ ಮಾದರಿ ಕೃಷಿಯನ್ನಾಗಿ ಮಾಡುವುದರ ಮೂಲಕ ಈ ಜಿಲ್ಲೆಯ ಸಮಗ್ರ ಚಿತ್ರಣವನ್ನೇ ಬದಲಾಯಿಸುತ್ತೇನೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು (ಜೂನ್.19) ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳಕ್ಕೆ ನಾನು ಕೃಷಿ ಸಚಿವರಾಗಿ ಬರುತ್ತೇನೆಂದು ಕನಸು-ಮನಸಿನಲ್ಲಿ ಅಂದುಕೊAಡಿರಲಿಲ್ಲ. ಈ ಜಿಲ್ಲೆಯ ಉಸ್ತುವಾರಿ ಹಾಗೂ ಕೃಷಿ ಸಚಿವನಾಗಿ ಬಂದಿರುವುದು ನನ್ನ ಸುದೈವವಾಗಿದ್ದು, ಈ ಜಿಲ್ಲೆಯು ಕೃಷಿಯಲ್ಲಿ ಭಾರತದಲ್ಲಿಯೇ ಮಾದರಿಯನ್ನಾಗಿ ಮಾಡಲು ಶ್ರಮೀಸುತ್ತೇವೆ. ರಾಜ್ಯದ ಕೃಷಿ ಸಚಿವನಾದ ಮೇಲೆ ಹೂ, ಹಣ್ಣು, ತರಕಾರಿಗಾಗಿ 165 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದು, ಮೆಕ್ಕೆಜೋಳ ಬೆಳೆದ 10 ಲಕ್ಷ ರೈತರಿಗೆ ಐದು ಸಾವಿರ ರೂಪಾಯಿಯಂತೆ ಸುಮಾರು 500 ಕೋಟಿ ಹಣವನ್ನು ಪ್ರೋತ್ಸಾಹಧನವನ್ನಾಗಿ ಸರ್ಕಾರದಿಂದ ಮಂಜೂರು ಮಾಡಿರುವುದು ಮಾತ್ರವಲ್ಲದೇ ಇತ್ತೀಚೆಗೆ ಕೊಪ್ಪಳದಲ್ಲಿ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೂ ಕೂಡ ಪರಿಹಾರ ಒದಗಿಸುವ ಕಾರ್ಯ ಮಾಡಲಾಗಿದೆ ಎಂದರು.
ಇಡೀ ಜಗತ್ತಿನಲ್ಲಿ ಕೊರೊನಾ ಹರಡಲು ಮನುಷ್ಯನ ಅತಿಯಾದ ಸ್ವಾರ್ಥವೆ ಕಾರಣವಾಗಿದ್ದು, ಪ್ರಕೃತಿ ನಮ್ಮ ಮೇಲೆ ಮುನಿಸಿ ಕೊಂಡಿದೆ. ನಾವೆಲ್ಲರೂ ನಾನೆಂಬ ಅಟ್ಟಹಾಸದಿಂದ ಮೆರೆಯುತ್ತಿದ್ದೇವೆ. ಹಾಗಾಗಿ ಪಶುಗಳ ಬಾಯಿಗೆ ಚಿಕ್ಕ ಹಾಕುವ ಹಾಗೆ ನಮಗೂ ಬಾಯಿಗೆ ಮಾಸ್ಕ್ ಹಾಕಿಸುವಂತೆ ಪ್ರಕೃತಿ ಮಾಡಿದೆ. ಸದ್ಯ ಈ ಕೊರೊನಾ ಹೋಗುವ ಲಕ್ಷಣಗಳು ಕಂಡುಬರುತ್ತಿಲ್ಲ. ನಾವು ಅದರ ಜೊತೆಗೆ ಜಾಗೃತರಾಗಿ ಬದುಕುವುದನ್ನು ಕಲಿಯಬೇಕು ಎಂದರು.
ಆಶಾ ಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ತಮ್ಮ ಮನೆ, ಕುಟುಂಬ ಎಲ್ಲವನ್ನು ಬಿಟ್ಟು ಅವರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕೋವಿಡ್ ಲಕ್ಷಣವಿರುವ ವ್ಯಕ್ತಿಗಳನ್ನು ಗುರುತಿಸಿ, ತಾಲ್ಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿರುವ ಅವರ ಧೈರ್ಯ ಮೆಚ್ಚಲೇಬೇಕು ಎಂದು ಸಚಿವರು ಹೇಳಿದರು.
ಕರ್ನಾಟಕ ಸರ್ಕಾರದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು ಮಾತನಾಡಿ, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿತರ ಪತ್ತೆಗೆ ಸಹಾಯ ಮಾಡುವ ಮಹತ್ವದ ಕೆಲಸ ಮಾಡುವ ಆಶಾಕಾರ್ಯಕರ್ತೆಯರ ಧೈರ್ಯ ಮತ್ತು ಕರ್ತವ್ಯ ಪ್ರಜ್ಞೆ ನಿಜಕ್ಕೂ ಶ್ಲಾಘನೀಯ. ತಳಮಟ್ಟದಲ್ಲಿ ಪ್ರತಿ ಮನೆಗೆ ತೆರಳಿ ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರನ್ನು ಪತ್ತೆಹಚ್ಚಿ ರೋಗ ಲಕ್ಷಣಗಳನ್ನು ಗುರುತಿಸಿ ಸೋಂಕಿತರ ಕುರಿತು ಅವರು ಮಾಹಿತಿ ನೀಡುತ್ತಾರೆ. ಆದ್ದರಿಂದ ರಾಜ್ಯದಾದ್ಯಂತ ಅವರ ಸೇವೆಯನ್ನು ಗುರುತಿಸಿ ಪ್ರತಿ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಸಹಕಾರ ಇಲಾಖೆಯಡಿ ಬರುವ ವಿವಿಧ ಸಹಕಾರ ಸಂಸ್ಥೆ, ಒಕ್ಕೂಟಗಳ ಒಟ್ಟು ಲಾಭಾಂಶದಲ್ಲಿ ಸ್ವಲ್ಪ ಭಾಗವನ್ನು ಕ್ರೋಢೀಕರಿಸಿ ರಾಜ್ಯದ ಒಟ್ಟು 41,500 ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಒಟ್ಟು 12 ಕೋಟಿ 7.5 ಲಕ್ಷ ರೂ. ಗಳನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತಿದೆ ಎಂದರು.
ಆಶಾ ಕಾರ್ಯಕರ್ತೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ. 50,000 ಗಳ ಸಾಲವನ್ನು ನೀಡಲಾಗುತ್ತದೆ. ಸ್ವ-ಸಹಾಯ ಗುಂಪುಗಳು, ಸ್ತಿçà ಶಕ್ತಿ ಗುಂಪುಗಳು, ರೈತರು, ಬಡವರು ಮುಂತಾದವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಅಪೆಕ್ಸ್ ಬ್ಯಾಂಕ್‌ಗೆ 1,750 ಕೋಟಿ ಹಣವನ್ನು ನೀಡಲಾಗಿದ್ದು, ವಿವಿಧ ಭಾಗದ ಡಿಸಿಸಿ ಬ್ಯಾಂಕ್‌ಗಳ ಮೂಲಕ ಇದುವರೆಗೂ 1400 ಕೋಟಿಯಷ್ಟು ಹಣವನ್ನು ಸಾಲವಾಗಿ ನೀಡಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಸಾಲ ಮರುಪಾವತಿಗೆ 3 ತಿಂಗಳುಗಳ ಕಾಲವಧಿಯನ್ನು ವಿಸ್ತರಿಸಿದ್ದು, ಆಗಸ್ಟ್ವರೆಗೆ ಸಾಲ ಮರುಪಾವತಿ ಮಾಡಲು ಅವಕಾಶವಿದೆ. ಕೋವಿಡ್ ವಾರಿರ‍್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಆರ್ಥಿಕ ಸಹಾಯ ಮಾಡುವ ಯೋಜನೆಯಿದ್ದು, ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಆಶಾ ಕಾರ್ಯಕರ್ತೆಯರು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ಅವರು ಹೇಳಿದರು.
ಸಂಸದ ಸಂಗಣ್ಣ ಕರಡಿ ಮಾತನಾಡಿ ಆಶಾ ಕಾರ್ಯಕರ್ತೆಯರು ಈಗಾಗಲೇ ಆತ್ಮ ವಿಶ್ವಾಸದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಗೌರವ ರೂಪದಲ್ಲಿ 3 ಸಾವಿರ ರೂ. ಗಳ ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಅವರ ಆತ್ಮ ಬಲವನ್ನು ಇನ್ನಷ್ಟು ಹೆಚ್ಚಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಇನ್ನೊಬ್ಬರ ಬಳಿ ಮಾತನಾಡಲು ನಾವೆಲ್ಲ ಹಿಂಜರಿಯುವ ಸಂದರ್ಭದಲ್ಲಿ ಪ್ರತಿಯೊಬ್ಬರ ಹತ್ತಿರ ತೆರಳಿ ಅವರ ಆರೋಗ್ಯದ ಬಗ್ಗೆ ವಿವರ ಪಡೆಯುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಧೈರ್ಯ ಮೆಚ್ಚುವಂತಹದ್ದು ಎಂದು ಹೇಳಿದರು.
ಶಾಸಕ ಕೆ. ರಾಘವೇಂದ್ರ‍್ರ ಹಿಟ್ನಾಳ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವ ಇಂತಹ ಅಭಿನಂದನೀಯ ಕಾರ್ಯಕ್ರಮಗಳು ಅವರಲ್ಲಿ ಇನ್ನಷ್ಟು ಆತ್ಮ ವಿಶ್ವಾಸ ಹೆಚ್ಚುವಂತೆ ಮಾಡುತ್ತವೆ. ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗಿರುವ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಜನರಿಗೆ ಇನ್ನೂ ಸ್ವಚ್ಛತೆ, ಸಾಮಾಜಿಕ ಅಂತರದ ಕುರಿತು ತಿಳುವಳಿಕೆ ಬಂದಿಲ್ಲ. ಆಶಾ ಕಾರ್ಯಕರ್ತೆಯರು ಹಿಂದಿನ ದಿನಗಳಿಗಿಂತ ಮುಂದಿನ ದಿನಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಹೆಚ್ಚಾಗಿ ಮಾಡಬೇಕು. ವೈಯಕ್ತಿಕ ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಹೊರ ರಾಜ್ಯ, ಜಿಲ್ಲೆಯಿಂದ ಬಂದವರ ಕುರಿತು ಮಾಹಿತಿ ನೀಡುವ ಕುರಿತು ಅವರಿಗೆ ತಿಳುವಳಿಕೆ ಮೂಡಿಸಬೇಕು. ಜಾಗೃತರಾಗದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದ ಅನಿವಾರ್ಯತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದ ಅವರು ಕೊಪ್ಪಳ ಜಿಲ್ಲೆಗೆ ಹೆಚ್ಚಿನ ಸಂಖ್ಯೆ ಡಿಸಿಸಿ ಬ್ಯಾಂಕ್‌ಗಳ ಅಗತ್ಯವಿದ್ದು, ರಾಯಚೂರಿನಲ್ಲಿರುವ ಆರ್‌ಡಿಸಿಸಿ ಬ್ಯಾಂಕ್‌ನ್ನು ವಿಭಜಿಸಿ ಕೊಪ್ಪಳದಲ್ಲಿ ಹೊಸದಾಗಿ ಕೇಂದ್ರ ಸಹಕಾರಿ ಬ್ಯಾಂಕ್ ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಸಚಿವರಲ್ಲಿ ಮನವಿ ಮಾಡಿದರು.
ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಮಾತನಾಡಿ, ಆಶಾ ಕಾರ್ಯಕರ್ತೆಯರು ಬೇರೆ ರಾಜ್ಯ, ಜಿಲ್ಲೆಗಳಿಂದ ಬಂದವರನ್ನು ಗುರುತಿಸಿ ಮಾಹಿತಿ ನೀಡುವ ಕಾರ್ಯ ಮಾಡುತ್ತಿದ್ದು, ಅವರು ಸರ್ಕಾರಿ ನೌಕರರಲ್ಲದಿದ್ದರೂ ಕೇವಲ ಗೌರವ ಧನ ಪಡೆದು ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದು, ಪ್ರಸ್ತುತ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಷ್ಟು ದಿನ ತಾವು ಮಾಡಿದ್ದ ಕಾರ್ಯಗಿಂತ ಇನ್ನೂ ಹೆಚ್ಚಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ಮಾತನಾಡಿ, ಕೊಪ್ಪಳ ಜಿಲ್ಲಾ ಕೇಂದ್ರದ ಮಧ್ಯವರ್ತಿ ಸಹಕಾರಿ ಬ್ಯಾಂಕ್ ರಾಯಚೂರು ಇದನ್ನು ವಿಭಜಿಸಿ ಕೊಪ್ಪಳ ಜಿಲ್ಲೆಗೆ ಕೇಂದ್ರ ಸಹಕಾರಿ ಬ್ಯಾಂಕ್ ಕೊಪ್ಪಳ ಅಂತಾ ಹೊಸದಾಗಿ ರಚನೆ ಮಾಡಬೇಕೆಂದು ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಸಹಕಾರ ಸಚಿವರಿಗೆ ಮನವಿ ಮಾಡಿದ ಶಾಸಕರು, ಕರೋನಾ ನಿರ್ಮೂಲನೆಗಾಗಿ ಪಿ.ಡಿ.ಓಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು ಗ್ರಾಮೀಣ ಪ್ರದೇಶಗಳಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭ ಕೊರೊನಾ ನಿರ್ಮೂಲನೆಗೆ ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಸತ್ಕರಿಸಲಾಯಿತು. ಅಲ್ಲದೇ ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಕೊರೋನಾ ನಿರ್ಮೂಲನೆ ಶ್ರಮಿಸಿದ್ದು, ಇವರ ಪರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ ಅವರಿಗೆ ಸನ್ಮಾನಿಸಲಾಯಿತು. ಮುಂಗಾರು ಹಂಗಾಮಿನ ಫಸಲ್ ಭೀಮಾ ಯೋಜನೆಯ ಕುರಿತು ವಿವರಗಳನ್ನು ಒಳಗೊಂಡ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸರ್ವೋದಯ ಬೈಯರ್ ಕಂಪನಿ ವತಿಯಿಂದ 5 ಜನ ರೈತರಿಗೆ ಸಾಂಕೇತಿಕವಾಗಿ ಉಚಿತ ಬೀಜ ವಿತರಣೆ ಮಾಡಲಾಯಿತು.
ರಾಯಚೂರು ಜಿಲ್ಲಾ ಕೆಂದ್ರ ಮಧ್ಯವರ್ತಿ ಸಹಕಾರಿ ಬ್ಯಾಂಕಿ ನಿ., ಇದನ್ನು ವಿಭಜಿಸಿ ಕೊಪ್ಪಳ ಜಿಲ್ಲೆಗೆ ಕೆಂದ್ರ ಸಹಕಾರಿ ಬ್ಯಾಂಕ್ ನಿ., ಕೊಪ್ಪಳ ಎಂದು ಹೊಸದಾಗಿ ರಚನೆ ಮಾಡಿ ಆದೇಶ ಹೊರಡಿಸುವಂತೆ ಮಾಜಿ ಶಾಸಕ ಶಿವರಾಮೇಗೌಡ ಅವರು ಸಹಕಾರ ಸಚಿವರಿಗೆ ಮನವಿ ಸಲ್ಲಿಸಿದರು.
ಬಸವರಾಜ ಪಿ. ಸ್ವಾಗತಿಸಿದರು. ಕಲಬುರಗಿ ವಿಭಾಗದ ಜಂಟಿ ನಿಬಂಧಕರಾದ ಗೋಪಾಲ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಪಾಟೀಲ್ ಮತ್ತು ತಂಡ ನಾಡಗೀತೆ ಕಾರ್ಯಕ್ರಮ ನಡೆಸಿಕೊಟ್ಟರು. ಸಿ.ವಿ. ಜಡಿಯವರ ನಿರೂಪಿಸಿದರು. ಈ ಕಾರ್ಯಕ್ರಮಕ್ಕೂ ಮುನ್ನ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಉಪ ವಿಭಾಗಾಧಿಕಾರಿ ನಾರಯಣರೆಡ್ಡಿ ಕನಕರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error