ಕೊಪ್ಪಳ ಜಿಲ್ಲೆ ಬರ ಪರಿಶೀಲನೆ

ಕೊಪ್ಪಳ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಪರಿಶೀಲನೆಗೆ  ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಬರ ಪರಿಶೀಲನೆ ಸಂಪುಟ ಉಪ ಸಮಿತಿಯು  ಯಲಬುರ್ಗಾ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳು ತೆಗೆಯಿಸಿ ಕೆರೆಗೆ ತುಂಗಭದ್ರಾ ನೀರು ತುಂಬಿಸುತ್ತಿರುವುದನ್ನು ಪರಿಶೀಲನೆ ನಡೆಸಿತು.  ನಂತರ ಕವಲೂರು ಗ್ರಾಮದ ಕೆರೆಗೆ ತುಂಗಭದ್ರಾ ನೀರು ತುಂಬಿಸಿ ಭರ್ತಿ ಮಾಡಿರುವುದನ್ನು ಪರಿಶೀಲಿಸಿದರು.  ಕೊಪ್ಪಳ ತಾಲೂಕಿನ ದದೇಗಲ್ ಗ್ರಾಮದಲ್ಲಿ ಬಯಲು ಬಹಿರ್ದೆಸೆ ಗ್ರಾಮವಾಗಿಸಿದ ಯೋಜನೆ, ಶುದ್ಧ ಕುಡಿಯುವ ನೀರು ಘಟಕ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

Leave a Reply