ಕೊಪ್ಪಳ ಜಿ.ಪಂ. ನೂತನ ಸಿಇಓ ಆಗಿ ಆರ್.ಎಸ್. ಪೆದ್ದಪ್ಪಯ್ಯ

ಕೊಪ್ಪಳ ಜ. 25 ): ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆರ್.ಎಸ್. ಪೆದ್ದಪ್ಪಯ್ಯ ಅವರು ಅಧಿಕಾರ ವಹಿಸಿಕೊಂಡರು.
ಜಿ.ಪಂ. ಸಿಇಓ ಆಗಿದ್ದ, ವೆಂಕಟ್‍ರಾಜಾ ಅವರು ಬೆಂಗಳೂರಿಗೆ ವರ್ಗಾವಣೆಯಾಗಿರುವ ಹಿನ್ನೆಲೆ, ಆರ್.ಎಸ್. ಪೆದ್ದಪ್ಪಯ್ಯ ಅವರು ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗುರುವಾರದಂದು ಅಧಿಕಾರ ವಹಿಸಿಕೊಂಡರು. ಆರ್.ಎಸ್. ಪೆದ್ದಪ್ಪಯ್ಯ ಅವರು ಈ ಹಿಂದೆ ಗುಲಬರ್ಗಾ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಕೊಪ್ಪಳ ಜಿ.ಪಂ. ಸಿಇಓ ಆಗಿದ್ದಾರೆ.

Please follow and like us:
error