ಕೊಪ್ಪಳ : ಬಿಡಾಡಿ ದನಗಳ ನಿಯಂತ್ರಣಕ್ಕೆ ಸೂಚನೆ


ಕೊಪ್ಪಳ ಅ.  ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಬಿಡಾಡಿ ದನಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತು ಬಿಡಾಡಿ ದನಗಳ ಮಾಲಿಕರುಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿಡಾಡಿ ದನಗಳಿದ್ದು, ಇವು ನಗರದ ಪ್ರಮುಖ ರಸ್ತೆಗಳಲ್ಲಿ ನಿಲ್ಲುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಅಲ್ಲದೇ ನಗರದಲ್ಲಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಡಾಡಿ ದನಗಳು ಮಲಗುತ್ತಿದ್ದು, ಇದರಿಂದಾಗಿ ರಸ್ತೆ ಅಪಘಾತ ಉಂಟಾಗುವ ಸಂಭವ ಇರುತ್ತದೆ. ಈಗಾಗಲೇ ಸಾಕಷ್ಟು ಅಪಘಾತಗಳು ಜರುಗಿದ್ದು, ಈ ಕುರಿತು ಸಾರ್ವಜನಿಕರಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಾಕಷ್ಟು ದೂರುಗಳು ಸಹ ಸ್ವೀಕೃತವಾಗಿರುತ್ತವೆ. ಈ ವಿಷಯದ ಕುರಿತು ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಜಿಲ್ಲಾ ಆಡಳಿತ ಭವನ ಕೊಪ್ಪಳ ಇವರ ಪತ್ರದ ಪ್ರಕಾರ ನಗರದಲ್ಲಿರುವ ಬಿಡಾಡಿ ದನಗಳ ನಿಯಂತ್ರಣ ಮಾಡಲು ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ.
ನಗರದಲ್ಲಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮದ್ಯದಲ್ಲಿ ಬಿಡಾಡಿ ದನಗಳು ಮಲಗುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಇದರಿಂದ ರಸ್ತೆ ಅಪಘಾತಗಳು ಕೂಡಾ ಸಂಭವಿಸುತ್ತವೆ. ಬಿಡಾಡಿ ದನಗಳು ತರಕಾರಿ ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ತಿನ್ನುವ ನೂಕು-ನುಗ್ಗಲಿನಲ್ಲಿ ಮಾರುಕಟೆಗೆ ಬಂದಿರುವ ಸಾರ್ವಜನಿಕರಿಗೆ ಹಾಗೂ ತರಕಾರಿ ಮಾರಾಟಗಾರರಿಗೂ ಸಹ ತುಂಬಾ ತೊಂದರೆ ಉಂಟಾಗುತ್ತಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಕಿರಿದಾದ ರಸ್ತೆಗಳಲ್ಲಿ ದನಗಳು ಗುದ್ದಾಡುತ್ತಾ ಓಡಿ ಬರುವುದರಿಂದ ಸಣ್ಣ ಪುಟ್ಟ ಮಕ್ಕಳಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಹ ಅಪಘಾತ ಉಂಟಾಗುತ್ತಿವೆ. ರಸ್ತೆ ಮದ್ಯದಲ್ಲಿ ಬಿಡಾಡಿ ದನಗಳು ಗುಂಪು ಗುಂಪಾಗಿ ನಿಲ್ಲುವುದರಿಂದ ಟ್ರಾಫಿಕ್ ಜಾಮ್ ಆಗಿ ಅಪಘಾತ ಉಂಟಾಗುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿವೆ ಎಂದು ಈ ಕುರಿತು ಕಳೇದ ವರ್ಷ ಅಂದರೆ ೨೦೧೭ರ ಅ. ೧೦ ರಂದು ರಂದು ದನ ಕರುಗಳ ಸಾಕಾಣಿಕೆ ಮಾಡುವವರ ಮಾಹಿತಿಗಾಗಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಬಿಡಾಡಿ ದನಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಹ ತಿಳಿಸಲಾಗಿತ್ತು. ಆದಾಗ್ಯೂ ಸಹ ಇದುವರೆಗೂ ಯಾವುದೇ ಕ್ರಮ ತೆಗೆದು ಕೊಂಡಿರುವುದು ಕಂಡು ಬಂದಿರುವುದಿಲ್ಲ.
ಆದಕಾರಣ ಬಿಡಾಡಿ ದನಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸುತ್ತಿದ್ದು, ದನ ಕರುಗಳ ಸಾಕಾಣಿಕೆ ಮಾಡುತ್ತಿರುವವರು/ ಬಿಡಾಡಿ ದನಗಳ ಮಾಲಿಕರು ಸೂಚನಾ ಅಂಶಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಮತ್ತೊಮ್ಮೆ ಕಟ್ಟುನಿಟ್ಟಾಗಿ ಸೂಚಿಸಿದೆ. ತಪ್ಪಿದಲ್ಲಿ ತಮ್ಮ ದನ ಕರುಗಳನ್ನು ರಸ್ತೆಗೆ ಬಿಡುತ್ತಿರುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಾನೂನು ರೀತ್ಯಾ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Please follow and like us:
error