ಕೊಪ್ಪಳ : 71ನೇ ಸ್ವಾತಂತ್ರ್ಯ ದಿನಾಚರಣೆ

ಕೊಪ್ಪಳ : 71ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ನಂತರ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ತಾ.ಪಂ. ಅಧ್ಯಕ್ಷ ಕೆ. ಬಾಲಚಂದ್ರನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಮೊದಲಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೊಪ್ಪಳದ ವಿವಿಧ ಶಾಲೆಗಳ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related posts