ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

ಬಿಜೆಪಿ ಹಾಗೂ ಆರ್ರೆಸ್ಸೆಸ್ ಉಗ್ರಗಾಮಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು.

ಕೊಪ್ಪಳದ ಗದಗ್ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ದೇಶಭಕ್ತ ಸಂಘಟನೆಯಾಗಿರುವ ಆರ್ರೆಸ್ಸೆಸ್, ಭಜರಂಗದಳ ಹಾಗೂ ಬಿಜೆಪಿಯನ್ನು ಹಾಗೂ ಅವುಗಳ

ಕಾರ್ಯಕರ್ತರನ್ನು ಉಗ್ರಗಾಮಿಗಳು ಎಂದು ಸಿದ್ದರಾಮಯ್ಯ ಹೇಳಿದ ಮೂಲಕ ದ್ರೋಹ ಮಾಡಿದ್ದಾರೆ. ಹಾಗಾದರೆ ನಮ್ಮನ್ನು ಬಂಧಿಸಿ ಎಂದು ಆಕ್ರೋಶ ಆಗ್ರಹಿಸಿದರು. ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಪ್ರತಿಭಟನೆಯಲ್ಲಿ ಸಿ.ವಿ.ಚಂದ್ರಶೇಖರ್, ವಿರುಪಾಕ್ಷಪ್ಪ ಸಿಂಗನಾಳ, ನವೀನ್ ಗುಳಗಣ್ಣವರ್, ಹೇಮಲತಾ ನಾಯಕ್, ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ ಸೇರಿದಂತೆ ಇತರರು ಭಾಗವಹಿಸಿದ್ದರು.

Please follow and like us:
error