ಕೋವಿಡ್-19 ಸೊಂಕು ತಡೆ : ಕೂಲಿಕಾರರಿಗೆ ಜಾಗೃತಿ ಮೂಡಿಸಿ ಮಾಸ್ಕ್ ವಿತರಣೆ


ಕೊಪ್ಪಳ; ಕೋವಿಡ್-19 ಸೊಂಕು ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿ.ಪಂ. ಅಧ್ಯಕ್ಷ ಹಾಗೂ ಸಂಸದರಿAದ ಕೂಲಿಕಾರರಿಗೆ ಜಾಗೃತಿ ಮೂಡಿಸಿ ಮಾಸ್ಕ್ ವಿತರಿಸಲಾಯಿತು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳಗೇರಾ ಪಂಚಾಯತಿಯ ವಣಗೇರಾ ಮತ್ತು ಕಂದಕೂರ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಹೊಸಮನಿ ಹಾಗೂ ಸಂಸದ ಸಂಗಣ್ಣ ಕರಡಿರವರು ಇಂದು (ಮೇ.02) ಭೇಟಿ ನೀಡಿ ನರೇಗಾ ಯೋಜನೆಯ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಅಲ್ಲದೇ ಕೊರೋನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಕೂಲಿಕಾರರಿಗೆ ಜಾಗೃತಿ ಮೂಡಿಸಿ ಮಾಸ್ಕ್ ವಿತರಿಸಿದರು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಕೂಲಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಮತ್ತಿತರಿದ್ದರು.

Please follow and like us:
error