ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಕೆ. ರಾಘವೇಂದ್ರ ಹಿಟ್ನಾಳ


ಕೊಪ್ಪಳ : ೧೯ ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಕಾತರಕಿ-ಗೂಡ್ಲಾನೂರ, ಬಿಸರಳ್ಳಿ, ಬಿಕನಳ್ಳಿ, ಡಂಬ್ರಳ್ಳಿ, ಬೂದಿಹಾಳ, ಬೇಳೂರು ಹಾಗೂ ಮೈನಳ್ಳಿ ಗ್ರಾಮಗಳಲ್ಲಿ ಅಂದಾಜು ಮೊತ್ತ ರೂ. ೨.೦೦ ಕೋಟಿಯ ಚೆಕ ಡ್ಯಾಂ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ರವರು ಈ ಏಳು ವರ್ಷದ ಅವದಿಯಲ್ಲಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಅಂದಾಜು ಮೊತ್ತ ರೂ. ೩೦೦೦ ಕೋಟಿಗಿಂತ ಹೆಚ್ಚು ಅನುದಾನ ತಂದು ಕ್ಷೇತ್ರಕ್ಕೆ ಅತ್ಯವಶ್ಯಕವಿರುವ ಮೂಲಭೂತ ಸೌಕರ್ಯ ಕಲ್ಪಿಸುವದರ ಜೊತೆಗೆ ಶಿಕ್ಷಣ, ಆರೋಗ್ಯ, ನೀರಾವರಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿ ಕೈಗೊಳ್ಳಲಾಗಿದೆ, ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ಗ್ರಾಮಕ್ಕೆ ರೂ. ೨.೦೦ ಕೋಟಿಯಿಂದ ರೂ. ೧೦.೦೦ ಕೋಟಿಯವರೆಗೆ ಅನುದಾನ ನೀಡಿದ್ದು ರಸ್ತೆ, ಚರಂಡಿ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ, ಶಾಲಾ ಕೊಠಡಿ, ಪದವಿ ಕಾಲೇಜು ಕೊಠಡಿ ನಿರ್ಮಾಣ ಕಾಮಗಾರಿ ಹಂತ ಹಂತವಾಗಿ ಪೂರ್ಣಗೊಳಿಸಲಾಗಿದೆ.

Please follow and like us:
error