ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಿ ಪರಿಹಾರ ಘೋಷಣೆ ಮಾಡಲಿ- ಸಿ.ವಿ.ಚಂದ್ರಶೇಖರ

ಕೊಪ್ಪಳ: ಕೊರೋನಾ ಮಹಾಮಾರಿ ರೋಗದಿಂದ ರಾಜ್ಯದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಯವರು ಬಹಳ ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಅವರ ಸಂಕಷ್ಟಗಳಿಗೆ ಸರಕಾರ ತಕ್ಷಣ ಸ್ಪಂದಿಸಿ ಪರಿಹಾರ ಘೋಷಣೆ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ. ವಿ. ಚಂದ್ರಶೇಖರ ಸರಕಾರವನ್ನು ಒತ್ತಾಯಿಸಿದ್ದಾರೆ.

ಅವರು ಕೊಪ್ಪಳ ತಾಲೂಕ ಅನುದಾನ ರಹಿತ ಆಡಳಿತ ಮಂಡಳಿ ಒಕ್ಕೂಟ ಹಾಗೂ ಸಿ. ವಿ. ಚಂದ್ರಶೇಖರ್ ಸಹಯೋಗದಲ್ಲಿ ಶಿಕ್ಷಕರಿಗೆ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಶೈಕ್ಷಣಿಕ ಸಂಸ್ಥೆಗಳು ಇಂತಹ ಪರಿಸ್ಥಿತಿಯಲ್ಲಿ ಸಿಬ್ಬಂದಿಗೆ ಸಹಾಯ ಮಾಡುತ್ತಿರುವುದು ಉತ್ತಮ ಕೆಲಸ ಎಂದು ಶ್ಲಾಘಿಸಿದರು.

ನ್ಯಾಯವಾದಿ ರಾಘವೇಂದ್ರ ಪಾನಘಂಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಾ, ಸರಕಾರ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಪರಿಹಾರ ನೀಡಿದೆ. ಆದರೆ ಖಾಸಗಿ ಶಾಲೆಗಳ ಶಿಕ್ಷಕರಿಗೆ ಯಾವ ಪರಿಹಾರವನ್ನೂ ನೀಡದಿರುವುದು ಖೇದಕರ ಸಂಗತಿ ಎಂದು ಹೇಳಿದರು.

ಕೂಡಲೆ ಶಾಸಕರು ಹಾಗೂ ಸಂಸದರು ಸರಕಾರಕ್ಕೆ ಒತ್ತಾಯ ಮಾಡಿ ಶಿಕ್ಷಕರಿಗೆ ಪರಿಹಾರ ಕೊಡಿಸುವಲ್ಲಿ ಪ್ರಯತ್ನಿಸಿಬೇಕು ಎಂದು ಪಾನಘಂಟಿ ಆಗ್ರಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಹೀದ್ ತಹಶೀಲ್ದಾರ್ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಆಲಂಪಲ್ಲಿ, ಕಾರ್ಯದರ್ಶಿ ಪ್ರಹ್ಲಾದ್ ಅಗಳಿ, ದಾನಪ್ಪ ಕವಲೂರ, ಮಹ್ಮದ್ ಅಲಿಮುದ್ದಿನ್, ಮಲ್ಲಿಕಾರ್ಜುನ ಚೌಕಿಮಠ, ಶಿವನಗೌಡ ಪಾಟೀಲ, ವೀರಣ್ಣ ಕಂಬಳಿ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಪದಾಧಿಕಾರಿಗಳು ಭಾಗವಹಿಸಿದ್ದರು.

ಎ.ಕೆ.ಮುಲ್ಲಾನವರ ಸ್ವಾಗತಿಸಿ, ನಿರೂಪಿಸಿದರು. ಕಾಯ೯ದಶಿ೯ ನಾಗರಾಜ್ ಗುಡಿ ವಂದಿಸಿದರು.

Please follow and like us:
error