ಗಂಗಾವತಿ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ : ನ. 23 ರಂದು ಜನ ಸಂಪರ್ಕ ಸಭೆ

ಕೊಪ್ಪಳ ನ. 20 ): ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಕೊಪ್ಪಳ ಇವರು ನ. 23 ರಂದು ಜಿಲ್ಲೆಯ ಗಂಗಾವತಿ ತಾಲೂಕಿನ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕರಿಸಲು ಶ್ರೀರಾಮನಗರ ಗ್ರಾಮದಲ್ಲಿ ಜನಸಂಪರ್ಕ ಸಭೆಯನ್ನು ಕೈಗೊಂಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ನ. 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಗಂಗಾವತಿ ಹಳೇ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಮತ್ತು ಅದೇ ದಿನ ಮಧ್ಯಾಹ್ನ 12-30 ಗಂಟೆಯಿಂದ ಗಂಗಾವತಿ ತಾಲೂಕಿನ ಶ್ರೀರಾಮನಗರದ ಉನ್ನತೀಕರಿಸಿದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ (ಗ್ರಾ.ಪಂ. ಹಿಂದುಗಡೆ) ಜನಸಂಪರ್ಕ ಸಭೆ ಕೈಕೊಂಡು ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರುಗಳನ್ನು ಸ್ವೀಕರಿಸಲಿದ್ದು, ಗಂಗಾವತಿ ತಾಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಯನ್ನು ನೀಡಿ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೆÇಲೀಸ್ ಠಾಣೆ, ಪಿ.ಡಬ್ಲ್ಯೂ.ಡಿ ಕ್ವಾಟ್ರಸ್ ನಂ-5, ಈಶ್ವರ ಗುಡಿ ಹಿಂದುಗಡೆ, ಕೊಪ್ಪಳ ದೂ.ಸಂ: 08539-221833, ಮೊ-9480806244, 9480806319, 9480806320, ಅಥವಾ ಇ-ಮೇಲ್ ವಿಳಾಸ ಜsಠಿಞಠಿಟ.ಚಿಛಿb@ಞಚಿಡಿಟಿಚಿಣಚಿಞಚಿ.gov.iಟಿ ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಇನ್ಸ್‍ಫೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======

Please follow and like us:
error