ಗಣರಾಜ್ಯೋತ್ಸವ ಸಂಭ್ರಮದ ಆಚರಣೆ

ಜಿಲ್ಲಾ ಕ್ರೀಡಾಂಗಣದಲ್ಲಿ 69ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಅಲಂಕೃತಗೊಂಡ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿದ ಸಚಿವ ರಾಯರೆಡ್ಡಿ ಪೊಲೀಸ್, ಗೃಹರಕ್ಷಕದಳ, ಎನ್‍ಸಿಸಿ, ಸ್ಕೌಟ್ ಮತ್ತು ಗಡ್ಸ್ ಸೇರಿದಂತೆ 19 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವ ರಾಯರೆಡ್ಡಿ, ದೇಶ ಸ್ವತಂತ್ರ್ಯಗೊಂಡ ಮೇಲೆ ದೇಶವನ್ನು ಒಂದು ಗಣತಂತ್ರ ವ್ಯವಸ್ಥೆಯಲ್ಲಿ ತಂದ ಎಲ್ಲ ಮಹನೀಯರನ್ನು ಸ್ಮರಿಸಬೇಕು ಎಂದು ಹೇಳಿದರು. ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಎಸ್ಪಿ ಡಾ. ಅನೂಪಶೆಟ್ಟಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೆ. ರಾಜಶೇಖರ್ ಹಿಟ್ನಾಳ್ ಸೇರಿದಂತೆ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Please follow and like us:
error