You are here
Home > Koppal News > ಗಾಂಧೀ ಜಯಂತಿ : ಅ. ೦೨ ರಂದು ಕೊಪ್ಪಳದಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನ

ಗಾಂಧೀ ಜಯಂತಿ : ಅ. ೦೨ ರಂದು ಕೊಪ್ಪಳದಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನ

Koppal News  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ವರ್ಷಾಚರಣೆ ಅಂಗವಾಗಿ ಗಾಂಧೀಜಿರವರ ಜೀವನದ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನ ಕಾರ್ಯಕ್ರಮ ಅ. ೦೨ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ವರ್ಷಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಜೀವನ, ಹೋರಾಟ ಬದುಕಿನ ನೈಜ್ಯ ಚಿತ್ರಣವುಳ್ಳ ವಿಡಿಯೋ ತುಣುಕುಗಳನ್ನೊಳಗೊಂಡ ಸಾಕ್ಷ್ಯ ಚಿತ್ರ ಪ್ರದರ್ಶನವು ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ಧನಂಜಯಪ್ಪ   ತಿಳಿಸಿದ್ದಾರೆ.

Top