ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ : ರಾಜ್ಯ ಮಟ್ಟಕ್ಕೆ ಆಯ್ಕೆ

Koppal News  ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಭಾಗ್ಯನಗರದ ನ್ಯಾಷನಲ್ ಪ್ರೌಢ ಶಾಲೆಯ ೭ ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿವಲೀಲಾ ನಗರ್ ಗುಂಡು ಎಸೆತ (Shoಣಠಿuಣ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ.
ದೈಹಿಕ ಶಿಕ್ಷಕರಾದ   ವೆಂಕಟೇಶ ನಾಯಕ, ಬಸವರಾಜ ಬಂಗಾರಿ ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ   ಪಹ್ಲಾದ ಅಗಳಿ, ಪ್ರಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವನಿತಾ ಗಡಾದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Please follow and like us:
error