ಗೋಶಾಲೆಗೆ ಜಿಲ್ಲಾಧಿಕಾರಿ ಭೇಟಿ 

ಕೊಪ್ಪಳ :ಜಾನುವಾರುಗಳ ಸಂರಕ್ಷಣೆಗಾಗಿ ಜಿಲ್ಲಾಡಳಿತದ ವತಿಯಿಂದ ಕುಷ್ಟಗಿ ತಾಲೂಕು ಕಲಕೇರಿ ಫಾರಂನಲ್ಲಿ ಪ್ರಾರಂಭಿಸಲಾಗಿರುವ ಗೋಶಾಲೆಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೋಮವಾರದಂದು ದಿಢಿರ್ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು.

  ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು ದಾಸ್ತಾನು, ನೀರು ಪೂರೈಕೆ, ಶೆಡ್ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸದ್ಯ ಗೋಶಾಲೆಗಳಲ್ಲಿ 89 ಜಾನುವಾರುಗಳು ಇರುವುದನ್ನು ದಾಖಲೆಯ ವಹಿಯಲ್ಲಿ ಖಚಿತಪಡಿಸಿಕೊಂಡರು.   ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ಮೇವು ಅಥವಾ ನೀರಿನ ತೊಂದರೆಯಾಗದಂತೆ ಅಧಿಕಾರಿ, ಸಿಬ್ಬಂದಿಗಳು ನೋಡಿಕೊಳ್ಳಬೇಕು.  ಗೋಶಾಲೆ ನಿರ್ವಹಣೆಗೆ ನೇಮಿಸಲಾಗಿರುವ ಕೂಲಿ ಕಾರ್ಮಿಕರು, ಪಶುಸಂಗೋಪನೆ ಇಲಾಖೆ ನಿರೀಕ್ಷಕರು, ಗ್ರಾಮ ಸಹಾಯಕರು ತಮ್ಮ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು.  ಜಾನುವಾರುಗಳ ಸಂಖ್ಯೆ ಬರುವ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆಗಳಿದ್ದು, ಅದಕ್ಕೆ ಅನುಗುಣವಾಗಿ ಮೇವು ದಾಸ್ತಾನಿಗೆ ಅಧಿಕಾರಿಗಳು ಕ್ರಮ ವಹಿಸಬೇಕು.  ಜಿಲ್ಲೆಯ ಯಾವುದೇ ಗೋಶಾಲೆಗಳಿಗೆ ಆಕಸ್ಮಿಕ ಭೇಟಿ ನೀಡಿ, ಜಾನುವಾರುಗಳ ಸಂಖ್ಯೆ ಹಾಗೂ ಮೇವು ದಾಸ್ತಾನು, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸುವ ಕಾರ್ಯವನ್ನು ನಿಯಮಿತವಾಗಿ ಹಾಕಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.  

  ಪಶುಸಂಗೋಪನೆ, ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply