ಗ್ರಂಥಪಾಲಕ ಪ್ರಕಾಶಗೌಡ ಎಸ್.ಯು.ಗೆ : ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ: ಸನ್ಮಾನ

ಕೊಪ್ಪಳ : ತಾಲೂಕಿನ ಇರಕಲ್ಲಗಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥ ಪಾಲಕರಾದ ಪ್ರಕಾಶಗೌಡ ಎಸ್.ಯು. ಇವರಿಗೆ ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ-2018ನ್ನು ನೀಡಿ ಸನ್ಮಾನಿಸಲಾಯಿತು.
ಕಲಬುರ್ಗಿಯ ಹೈದ್ರಾಬಾದ್ – ಕರ್ನಾಟಕ ಗ್ರಂಥಪಾಲಕರ ಅಸೋಷಿಯನ್ ಹಾಗೂ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಮಹಾ ವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದ ಸಹಯೋಹದಲ್ಲಿ ಆಗಸ್ಟ್-12ರಂದು ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ಪ್ರಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಹೈದ್ರಾಬಾದ್-ಕರ್ನಾಟಕ ವಿಭಾಗದ ಕೊಪ್ಪಳ ಜಿಲ್ಲೆಯ ಕೊಪ್ಪಳ, ಕನಕಗಿರಿ ಮತ್ತು ಯಲಬುರ್ಗಾ ತಾಲೂಕಿನ ಪ್ರಥಮ ದರ್ಜೆ ಕಾಲೇಜುಗಳ ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳಿಗೆ ಪೂರಕ ಉಪಯುಕ್ತ ಕೆಲಸ ನಿರ್ವಹಿಸಿದ್ದಕ್ಕಾಗಿ ಹಾಗೂ ರಾಷ್ಟ್ರ ಮಟ್ಟದ ನ್ಯಾಕ್ ಕಮಿಟಿಯ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದ ಗ್ರಂಥಾಲಯಗಳ ಉನ್ನತೀಕರಣ ಹಾಗೂ ಅಚ್ಚುಕಟ್ಟು ನಿರ್ವಹಣೆಯ ಹಿನ್ನೆಲೆಯಲ್ಲಿ ಪ್ರಕಾಶಗೌಡ ಎಸ್. ಯು ಇವರ ಪರಿಗಣಿಸಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗಿದೆ.
ಈ ಪ್ರಶಸ್ತಿ ನೀಡಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ಅಪಾರ ವಿದ್ಯಾರ್ಥಿ ಬಳಗವು ಹರ್ಷ ವ್ಯಕ್ತ ಪಡಿಸಿದ್ದಾರೆ.

Please follow and like us:

Related posts