ಗ್ರಾಮಲೆಕ್ಕಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಗ್ರಾಮಲೆಕ್ಕಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆ ಗ್ರಾಮಲೆಕ್ಕಾಧಿಕಾರಿ ಹುದ್ದೆಯ ನೇರನೇಮಕಾತಿ ೨೦೧೭ರ ಸಂಬಂಧ ಬಾಕಿ ಉಳಿದ ೦೮ ಹುದ್ದೆಗಳ ಪೈಕಿ ೦೩ ಹುದ್ದೆಗಳಿಗೆ ೧:೫ ಪ್ರಮಾಣದಲ್ಲಿ ತಾತ್ಕಾಲಿಕ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಹಾಗೂ ೦೫ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಪಟ್ಟಿಯನ್ನು ವೆಬ್‌ಸೈಟ್ www.koppal.nic.in ನಲ್ಲಿ ಪ್ರಕಟಿಸಲಾಗಿದೆ. ಈ ಪರಿಶೀಲನಾ ಪಟ್ಟಿಯನ್ನು ಅಭ್ಯರ್ಥಿಗಳು ಪರಿಶೀಲಿಸಿಕೊಂಡು ಈ ಕುರಿತು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ನ. ೨೭ ರೊಳಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಗ್ರಾಮಲೆಕ್ಕಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು ಡಿಸೆಂಬರ್. ೦೧ ರಂದು ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ಸಂಬಂಧಿಸಿದ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ಪರಿಶೀಲನೆಗಾಗಿ ಕಡ್ಡಾಯವಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ವೆಬ್‌ಸೈಟ್ ಅನ್ನು ನೋಡಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್   ತಿಳಿಸಿದ್ದಾರೆ.

Please follow and like us:
error